ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಲಿಗ್ರಾಮ ಪಟ್ಟಣ ಪಂಚಾಯಿತಿ: ಅಧ್ಯಕ್ಷೆಯಾಗಿ ಸುಕನ್ಯಾ ಶೆಟ್ಟಿ ಆಯ್ಕೆ

Published 28 ಆಗಸ್ಟ್ 2024, 6:24 IST
Last Updated 28 ಆಗಸ್ಟ್ 2024, 6:24 IST
ಅಕ್ಷರ ಗಾತ್ರ

ಸಾಲಿಗ್ರಾಮ(ಬ್ರಹ್ಮಾವರ): ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷೆಯಾಗಿ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆಯಾಗಿ ಗಿರಿಜಾ ಪೂಜಾರಿ ಆಯ್ಕೆಯಾದರು.

ಬ್ರಹ್ಮಾವರದ ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾತಿ ಘೋಷಿಸಿದ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಗಿರಿಜಾ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಝಹಿರಾ ನಾಮಪತ್ರ ಸಲ್ಲಿಸಿದ್ದರು.

16 ಮಂದಿ ಸಂಖ್ಯಾ ಬಲದ ಸಾಲಿಗ್ರಾಮ ಪ.ಪಂ.ನಲ್ಲಿ ಬಿಜೆಪಿ 10, ಕಾಂಗ್ರೆಸ್‌ 5, ಪಕ್ಷೇತರ ಒಬ್ಬರು ಸದಸ್ಯರಿದ್ದು ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶಾಸಕ ಕಿರಣ್ ಕೊಡ್ಗಿ ಮತದೊಂದಿಗೆ 11, ಕಾಂಗ್ರೆಸ್‌ ಬೆಂಬಲಿತರು 5ಮತಗಳನ್ನು ಪಡೆದರು. ಪಕ್ಷೇತರ ಸದಸ್ಯೆ ರತ್ನಾ ನಾಗರಾಜ ಗಾಣಿಗ ತಟಸ್ಥರಾಗಿದ್ದು ಗಮನ ಸೆಳೆದರು.

ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮುಖ್ಯಾಧಿಕಾರಿ ಶಿವ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT