ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನರ ಮೇಲೆ ಹೊರೆ ಹೊರಿಸಿದ ಸಿಎಂ: ಸುನೀಲ್‌ ಕುಮಾರ್‌

Published 17 ಜೂನ್ 2024, 8:43 IST
Last Updated 17 ಜೂನ್ 2024, 8:43 IST
ಅಕ್ಷರ ಗಾತ್ರ

ಉಡುಪಿ: ಪೆಟ್ರೋಲ್ ಮತ್ತು ಡೀಸೆಲ್‌ ದರವನ್ನು ಏಕಾಏಕಿ ಏರಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಮೇಲೆ ಹೊರೆ ಹೊರಿಸಿದ್ದಾರೆ ಎಂದು ಕಾರ್ಕಳ ಶಾಸಕ ವಿ. ಸುನೀಲ್‌ ಕುಮಾರ್‌ ಆರೋಪಿಸಿದರು.

ಬಿಜೆಪಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿದರೆ, ಉಳಿದೆಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತದೆ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ಹೇಳಿದ್ದರು. ಈಗ ಅವರೇ ಅದನ್ನು ಮರೆತಿದ್ದಾರೆ ಎಂದರು.

ಉಳಿದ ರಾಜ್ಯಗಳಿಗೆ ಸರಿ ಸಮಾನವಾಗಿ ಬೆಲೆ ಏರಿಕೆ ಮಾಡಿದ್ದೇವೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ, ಕಿರಣ್‌ ಕುಮಾರ್ ಕೊಡ್ಗಿ, ಗುರುರಾಜ್‌ ಗಂಟಿಹೊಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಪಾಲ್ಗೊಂಡಿದ್ದರು.

ಪ್ರತಿಭಟನಕಾರರು ಕಡಿಯಾಳಿ ಬಳಿ, ಮಣಿಪಾಲ– ಉಡುಪಿ ರಸ್ತೆಯಲ್ಲಿ ಅಲ್ಪಕಾಲ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT