ಭಾನುವಾರ, ಡಿಸೆಂಬರ್ 8, 2019
21 °C
ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ವಿಶ್ವಪ್ರಿಯ ಸ್ವಾಮೀಜಿ ಸಲಹೆ

ಸೂರ್ಯನ ಬೆಳಕು ಆರೋಗ್ಯಕ್ಕೆ ಪೂರಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಉಡುಪಿ: ಬೆಳೆಯುವ ಮಕ್ಕಳು ನಿಯಮಿತವಾಗಿ ಸೂರ್ಯನ ಬೆಳಕಿಗೆ ಮೈಯೊಡ್ಡಿದಾಗ ಮಾತ್ರ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯಪೂರ್ಣರಾಗಿ ಬೆಳೆಯಲು ಸಾಧ್ಯ. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ನಿರ್ದೇಶಕ ವಿಶ್ವಪ್ರಿಯ ಸ್ವಾಮೀಜಿ ವಿಶ್ವಪ್ರಿಯ ಸ್ವಾಮೀಜಿ ತಿಳಿಸಿದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಈಚೆಗೆ ಏರ್ಪಡಿಸಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒತ್ತಡದ ಬದುಕಿನಲ್ಲಿ ದೈಹಿಕ ಚಟುವಟಿಕೆಗಳು ಇಲ್ಲವಾಗಿದೆ. ಪರಿಣಾಮ ಚಿಕ್ಕ ವಯಸ್ಸಿನಲ್ಲೇ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ದೈಹಿಕ ಚಟುವಟಿಕೆಗಳಿಂದ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಕ್ರೀಡಾ ಚಟುವಟಿಕೆಗಳು ಮನಸ್ಸಿಗೆ ಮುದ ನೀಡುತ್ತವೆ ಎಂದು ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಶೆಟ್ಟಿ , ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ ಬಿ.ಜಗದೀಶ್ ಶೆಟ್ಟಿ, ಖಜಾಂಚಿ ಪ್ರದೀಪ್ ಕುಮಾರ್, ಪ್ರಾಂಶುಪಾಲ ಸಂದೀಪ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ್ ಜೋಗಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಮುಖಂಡರಾದ ಮೇಧಾ ಸ್ವಾಗತಿಸಿದರು, ಪ್ರಹಲ್ಯಾ ಮಥಾಯಸ್ ಕಾರ್ಯಕ್ರಮ ನಿರ್ವಹಿಸಿದರು, ಇನಾ ರಾಬಿನ್ಸನ್ ವಂದಿಸಿದರು.

ಪ್ರತಿಕ್ರಿಯಿಸಿ (+)