ಬೈಂದೂರು: ‘ಗುತ್ತಿಗೆದಾರರಾಗಿ ಗುಣಮಟ್ಟದ ಕೆಲಸ ನಿರ್ವಹಿಸಿದ್ದ ಸುಬ್ರಾಯ ಶೇರುಗಾರರು ಹೆಸರು ಗಳಿಸಿದ್ದಾರೆ. ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ’ ಎಂದು ಮುಖಂಡ ಕೃಷ್ಣ ಪಾಲೇಮಾರ್ ಹೇಳಿದರು.

ಅವರು ಶನಿವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ನಡೆದ ಸುರಭಿ ಬೈಂದೂರು ಸಾಂಸ್ಕೃತಿಕ, ಸಾಹಿತ್ಯ, ಸೇವಾ ಪ್ರತಿಷ್ಠಾನದ ಸುರಭಿ ಜೈಸಿರಿ 2026 ಮತ್ತು ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ, ದಿ.ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಮರಣೆಯ ಸಾಂಸ್ಕೃತಿಕೋತ್ಸವದ ಮೂರನೆ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖಂಡರಾದ ಕೃಷ್ಣ ಪಾಲೇಮಾರ್, ಕೆ. ಗೋಪಾಲ ಪೂಜಾರಿ, ಶಿವರಾಮ ಕಾರಂತ ಬಾಲ ಪ್ರಶಸ್ತಿ ಪುರಸ್ಕೃತ ತ್ರಿಷಾ ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಪ್ರಭಾಕರ ಅಚ್. ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ, ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ, ರಾಮ ಕ್ಷತ್ರಿಯ ಸಮಾಜದ ಅಧ್ಯಕ್ಷ ರಾಮಕೃಷ್ಣ, ಬೈಂದೂರು ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ನಾಗರಾಜ ಶೆಟ್ಟಿ ನಾಕಟ್ಟೆ, ಜೆಸಿ ಬೈಂದೂರು ಸಿಟಿ ಅಧ್ಯಕ್ಷೆ ಚೈತ್ರಾ ಸತೀಶ್, ದಿ.ಸುಬ್ರಾಯ ಶೇರುಗಾರ್ ಪತ್ನಿ ಪಾರ್ವತಿ, ಮಕ್ಕಳಾದ ಪ್ರೇಮಾ, ಸುಧಾಕರ, ಸುಜಾತ ಭಾಗವಹಿಸಿದ್ದರು.

ಯಶೋದಾ, ಪೂರ್ಣಿಮಾ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು. ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ ವಂದಿಸಿದರು. ಸಂದೀಪ್, ರಾಘವೇಂದ್ರ ಕೆ. ನಿರೂಪಿಸಿದರು. ಸುರಭಿ ನೃತ್ಯ ವಿದ್ಯಾರ್ಥಿಗಳಿಂದ ಜಾನಪದ ನಾಟ್ಯ ವೈವಿಧ್ಯ, ಪ್ರೊ.ಕೃಷ್ಣೇಗೌಡ ಮತ್ತು ತಂಡದವರಿಂದ ಹಾಸ್ಯೋತ್ಸವ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.