ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮೀಣ ಪ್ರದೇಶಗಳಲ್ಲಿ ಕಲೆಯ ಉಳಿವಿಗೆ ಶ್ರಮಿಸುತ್ತಿರುವ 'ಸುರಭಿ'

Published : 16 ಸೆಪ್ಟೆಂಬರ್ 2024, 2:50 IST
Last Updated : 16 ಸೆಪ್ಟೆಂಬರ್ 2024, 2:50 IST
ಫಾಲೋ ಮಾಡಿ
Comments

ಬೈಂದೂರು: ಇತ್ತೀಚಿನ ದಿನಗಳಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಮೊಬೈಲ್ ಬಳಕೆಯಿಂದಾಗಿ ಸಾಹಿತ್ಯ, ಶಿಕ್ಷಣ, ಸಂಸ್ಕೃತಿ, ಕಲೆ, ನೃತ್ಯ, ಸಂಗೀತ, ಚಿತ್ರಕಲೆ, ಯಕ್ಷಗಾನ, ನಾಟಕ ಹೀಗೆ ಎಲ್ಲವನ್ನೂ ಮರೆಯುತ್ತಿದ್ದೇವೆ. ಗ್ರಾಮೀಣ ಪ್ರದೇಶಗಳಲ್ಲಿ ಕಲೆಯ ಉಳಿವಿಗೆ ಶ್ರಮಿಸುತ್ತಿರುವ ಸುರಭಿಯವರ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಪ್ರಾಂಶುಪಾಲ, ಸಾಹಿತಿ ಜಯಪ್ರಕಾಶ್ ಮಾವಿನಕುಳಿ ಹೇಳಿದರು.

ಶನಿವಾರ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆದ ಸುರಭಿ ಬೈಂದೂರು ಸಂಸ್ಥೆಯ ಬೆಳ್ಳಿಹಬ್ಬ ‘ರಜತಯಾನ’ಕ್ಕೆ ಚಾಲನೆ, ಲಾಂಛನ ಅನಾವರಣ ಸಮಾರಂಭದಲ್ಲಿ 25ನೇ ರಜತಯಾನ ಲಾಂಛನ ಅನಾವರಣಗೊಳಿಸಿ ಮಾತನಾಡಿ, ಮಕ್ಕಳಿಗೆ ವಿದ್ಯೆಯ ಜೊತೆ ಕಲೆ, ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಿ ಅವರನ್ನು ಸತ್ಪ್ರಜೆಯನ್ನಾಗಿ ರೂಪಿಸುವಲ್ಲಿ ನಮ್ಮ ಪಾತ್ರ ಪ್ರಾಮುಖ್ಯವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ್ ಹೊಳ್ಳ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಎಸ್.ವಿ. ಕಾಲೇಜು ಉಪನ್ಯಾಸಕ ಸುಜಯೀಂದ್ರ ಹಂದೆ  ಆಶಯ ನುಡಿಗಳನ್ನಾಡಿದರು. ಕಾರ್ಕಳ ರಂಗ ಸಂಸ್ಕೃತಿ ಅಧ್ಯಕ್ಷ ನಿತ್ಯಾನಂದ ಪೈ, ಸಂಸ್ಥೆಯ ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ, ನಿರ್ದೇಶಕ ಗಣಪತಿ ಹೋಬಳಿದಾರ್ ಇದ್ದರು.

ಪೂರ್ಣಿಮಾ ಪ್ರಾರ್ಥಿಸಿದರು. ಸುರಭಿ ಬೈಂದೂರು ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಸ್ವಾಗತಿಸಿದರು. ನಿರ್ದೇಶಕ ಸುಧಾಕರ್ ಪಿ. ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಅಬ್ದುಲ್ ರವೂಫ್‌ ನಿರ್ವಹಿಸಿದರು. ನಿಕಟಪೂರ್ವ ಕಾರ್ಯದರ್ಶಿ ಭಾಸ್ಕರ ಬಾಡ ವಂದಿಸಿದರು. ಮಂಗಳೂರಿನ ಜರ್ನಿ ಥಿಯೇಟರ್ ಗ್ರೂಪ್ ಪ್ರಸ್ತುತಿಯಲ್ಲಿ ಜಾನಪದ, ರಂಗ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT