ಬುಧವಾರ, ಜನವರಿ 19, 2022
18 °C

ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರೆಯಾಗಿ ಉಡುಪಿಯ ಸುರಯ್ಯ ಅಂಜುಮ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರರ ಆಯ್ಕೆಗಾಗಿ ನಡೆದ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯಾದ ‘ಯಂಗ್ ಇಂಡಿಯಾ ಕೇ ಬೋಲ್’ನಲ್ಲಿ ಉಡುಪಿಯ ಸುರಯ್ಯ ಅಂಜುಮ್ ರಾಷ್ಟ್ರೀಯ ವಕ್ತಾರೆಯಾಗಿ ಆಯ್ಕೆಯಾಗಿದ್ದು, ಯುವ ವಾಗ್ಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.

15,000 ಜನರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು 300 ಮಂದಿ ಆಯ್ಕೆಯಾಗಿದ್ದರು. ರಾಜ್ಯದ ಹತ್ತು ವಾಗ್ಮಿಗಳು ದೆಹಲಿಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಸುರಯ್ಯ ಅಂಜುಮ್ ಕೂಡ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ, ರಾಜ್ಯ ಮಟ್ಟದ 180 ಸ್ಪರ್ಧಿಗಳಲ್ಲಿ ಒಬ್ಬರಾಗಿ, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ 300 ವಾಗ್ಮಿಗಳಲ್ಲಿ ಕೊನೆಯ ಸುತ್ತಿಗೆ ಆಯ್ಕೆಯಾಗಿದ್ದರು.

ಅಂತಿಮ ಹಂತದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರೀಯ ಯುವ ವಾಗ್ಮಿ ಪ್ರಶಸ್ತಿ ಪಡೆದು, ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು