ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್‌ನಲ್ಲಿ (ಮಾಹೆ) ಸುಸ್ಥಿರ ಅಭಿವೃದ್ಧಿ ಹಾಗೂ ದೇಶದ ಆರ್ಥಿಕ ನೀತಿಗಳ ಕುರಿತು ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಸುಸ್ಥಿರ ಅಭಿವೃದ್ಧಿ ಹವಾಮಾನ ಬದಲಾವಣೆ ತಗ್ಗಿಸುವಿಕೆ ಹಾಗೂ ಮಾರುಕಟ್ಟೆಗಳಲ್ಲಿ ಬದಲಾಗುತ್ತಿರುವ ಆರ್ಥಿಕ ನೀತಿಗಳ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬಳಿಕ ಮಾಹೆ ಸಂಸ್ಥೆಗಳು, ಟ್ಯಾಪ್ಮಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಸಂವಾದ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕರು, ಸಾರ್ವಜನಿಕರು ಭಾಗವಹಿಸಿದ್ದರು. ಮಾಹೆಯ ಕುಲಪತಿ ಲೆ.ಜ.ಎಂ.ಡಿ. ವೆಂಕಟೇಶ್ ಇದ್ದರು. ವಾಣಿಜ್ಯ ವಿಭಾಗದ ಮುಖಸ್ಥ ಸಂದೀಪ್ ಎಸ್.ಶೆಣೈ ಸ್ವಾಗತಿಸಿದರು ಎವೆರಿಲ್ ನಿರೂಪಿಸಿದರು.
ಲಕ್ಷ್ಮೀವರತೀರ್ಥ ಆರಾಧನಾ ಮಹೋತ್ಸವ
ಸಂಪನ್ನ ಹಿರಿಯಡ್ಕ: ಶೀರೂರು ಮಠದ ಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಶೀರೂರು ಮಠ ಹಿಂದೂ ಯುವ ಸೇನೆ ಉಡುಪಿ ಸಹಯೋಗದಲ್ಲಿ ಭಾನುವಾರ ಇಲ್ಲಿಗೆ ಸಮಿಪದ ಶೀರೂರು ಮೂಲಮಠದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಿತು. ಬೆಳಿಗ್ಗೆ ಮಠದ ದೇವರುಗಳಿಗೆ ಮಹಾಭಿಷೇಕ ಗೋವುಗಳಿಗೆ ಗೋಗ್ರಾಸ ವಿತರಣೆ ವಿರಾಜ ಹೋಮದ ಪೂರ್ಣಾಹುತಿ ಮಧ್ಯಾಹ್ನ ಮಹಾಪೂಜೆ ಶ್ರೀಗಳ ವೃಂದಾವನಕ್ಕೆ ವಿಶೇಷ ಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ಸಂಜೆ ಮುಖ್ಯಪ್ರಾಣ ದೇವರಿಗೆ ವಿಶೇಷ ರಂಗಪೂಜೆ ನಡೆಯಿತು. ರಾಜ್ಯಮಟ್ಟದ ಆಯ್ದ ಭಜನಾ ತಂಡಗಳ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಶಾಸಕ ಯಶ್‌ಪಾಲ್ ಎ.ಸುವರ್ಣ ಉದ್ಘಾಟಿಸಿದರು. ಮಧ್ಯಾಹ್ನ ಭೈರಂಪಳ್ಳಿ ಗ್ರಾಮ ವ್ಯಾಪ್ತಿಯ 1ರಿಂದ 5 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ ವಹಿಸಿ ಧಾರ್ಮಿಕ ಪ್ರವಚನ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇದ್ದರು. ಭೈರಂಪಳ್ಳಿ ಗ್ರಾಮದ 6 ಸರ್ಕಾರಿ ಶಾಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜ್ಞಾನನಿಧಿ ವಿತರಣೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.