ನೀತಿ ಸಂಹಿತೆ ಉಲ್ಲಂಘನೆ: ಮುಖ್ಯೋಪಾಧ್ಯಾಯ ಅಮಾನತು

ಶನಿವಾರ, ಏಪ್ರಿಲ್ 20, 2019
29 °C

ನೀತಿ ಸಂಹಿತೆ ಉಲ್ಲಂಘನೆ: ಮುಖ್ಯೋಪಾಧ್ಯಾಯ ಅಮಾನತು

Published:
Updated:

ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿಯ ಕೊಡವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಂದರ್ ಅವರನ್ನು ಅಮಾನತುಗೊಳಿಸಲಾಗಿದೆ.

ಏ.7 ರಂದು ಕಾರ್ಕಳದಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾಲೋಚನಾ ಕಾರ್ಯಕ್ರಮದಲ್ಲಿ ಸರ್ವೆಯಾಗಿರುವ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚಿಕೆ ಮಾಡುವ ಬಗ್ಗೆ, ಗುತ್ತಿಗೆ ಆಧಾರದಲ್ಲಿ ದಲಿತರಿಗೆ ಅವಕಾಶ ಕಲ್ಪಿಸುವ ಬಗ್ಗೆ ಹಾಗೂ ಸ್ವಉದ್ಯೋಗಕ್ಕೆ ಅನುದಾನ ನೀಡುವ ಬಗ್ಗೆ ಸುಂದರ್ ಮನವಿ ಸಲ್ಲಿಸಿದ್ದರು.

ಮಾರ್ಚ್ 10ರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ರಾಜಕೀಯ ಚುನಾವಣಾ ಪ್ರಚಾರ ಸಭೆ, ಸಮಾರಂಭಗಳಲ್ಲಿ ಸರ್ಕಾರಿ ನೌಕರರು ಅಧಿಕೃತವಾಗಿ ಭಾಗವಹಿಸಲು ಅವಕಾಶವಿರುವುದಿಲ್ಲ. ಆದರೂ, ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಭಾಷಣ ಮಾಡಿ, ಪ್ರಚಾರ ಕಾರ್ಯ ಕೈಗೊಂಡ ಆರೋಪದ ಮೇಲೆ ಸುಂದರ್ ಅವರನ್ನು ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !