ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ಸಾಧಕರಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ

ಮುದ್ರಾಡಿ ನಮತುಳುವೆರ್‌ ಕಲಾ ಸಂಘಟನೆ
Published 30 ನವೆಂಬರ್ 2023, 13:19 IST
Last Updated 30 ನವೆಂಬರ್ 2023, 13:19 IST
ಅಕ್ಷರ ಗಾತ್ರ

ಹೆಬ್ರಿ: ಮುದ್ರಾಡಿ ನಮತುಳುವೆರ್‌ ಕಲಾ ಸಂಘಟನೆಯಿಂದ ಸುವರ್ಣ ಕರ್ನಾಟಕ ಕಾರ್ಯಕ್ರಮದ ಪ್ರಯುಕ್ತ ನೀಡುವ ಸುವರ್ಣ ಕರ್ನಾಟಕ ಪ್ರಶಸ್ತಿಗೆ ಐವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಶಂಕರಪುರ ದ್ವಾರಕಾಮಯಿ ಮಠದ ಸಾಯಿ ಈಶ್ವರ್‌ ಗುರೂಜಿ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೋಕ್ತೇಸರ ಧನಂಜಯ ಶೆಟ್ಟಿ, ಮುನಿಯಾಲು ಗೋಧಾಮದ ಸಂಸ್ಥಾಪಕ ಜಿ. ರಾಮಕೃಷ್ಣ ಆಚಾರ್‌, ಅರಸಮ್ಮಕಾನು ಶ್ರೀ ನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೋಕಸ್ತೇರ ಚಂದ್ರಶೇಖರ ಶೆಟ್ಟಿ ಮತ್ತು ಧಾರ್ಮಿಕ ಮುಂದಾಳು ಹೆಬ್ರಿ ಭಾಸ್ಕರ ಜೋಯಿಸ್‌ ಅವರಿಗೆ ಪ್ರಶಸ್ತಿ  ನೀಡಲಾಗುತ್ತದೆ ಎಂದು ಮುದ್ರಾಡಿ ನಮತುಳುವೆರ್‌ ಕಲಾ ಸಂಘಟನೆಯ ಅಧ್ಯಕ್ಷ ಸುಕುಮಾರ್‌ ಮೋಹನ್‌ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸುವರ್ಣ ಕರ್ನಾಟಕ ರಂಗ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಬೆಳಗಾವಿಯ ರಂಗನಿರ್ದೇಶಕ ಶ್ರೀಪತಿ ಮಂಜನಬೈಲು ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅಧ್ಯಕ್ಷತೆ ವಹಿಸುವರು. ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್‌ ಕುಮಾರ್‌ ಶೆಟ್ಟಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಾಸ್ತುತಜ್ಞ ಕಾರ್ಕಳದ ಪ್ರಮಲ್‌ ಕುಮಾರ್‌ ಭಾಗವಹಿಸುವರು.

ಜಿ.ರಾಮಕೃಷ್ಣ ಆಚಾರ್‌
ಜಿ.ರಾಮಕೃಷ್ಣ ಆಚಾರ್‌
ಧನಂಜಯ ಶೆಟ್ಟಿ
ಧನಂಜಯ ಶೆಟ್ಟಿ
ಸಾಯಿ ಈಶ್ವರ್‌ ಗುರೂಜಿ
ಸಾಯಿ ಈಶ್ವರ್‌ ಗುರೂಜಿ
ಹೆಬ್ರಿ ಭಾಸ್ಕರ ಜೋಯಿಸ್‌
ಹೆಬ್ರಿ ಭಾಸ್ಕರ ಜೋಯಿಸ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT