ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಾಶ್ ಬೈಜೂಸ್‌ನಿಂದ ಟ್ಯಾಲೆಂಟ್ ಹಂಟ್ ಪರೀಕ್ಷೆ

Last Updated 8 ಸೆಪ್ಟೆಂಬರ್ 2022, 16:34 IST
ಅಕ್ಷರ ಗಾತ್ರ

ಉಡುಪಿ: ಆಕಾಶ್ ಬೈಜೂಸ್‌ನಿಂದ 2022ನೇ ಸಾಲಿನ ಆಕಾಶ್‌ ನ್ಯಾಷನಲ್ ಟ್ಯಾಲೆಂಟ್ ಹಂಟ್ ಪರೀಕ್ಷೆ (ಆಂತೆ) ಆಯೋಜಿಸಿದ್ದು ಅತಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌, ನಗದು ಬಹುಮಾನ ನೀಡಲಾಗುವುದು ಎಂದು ಸಂಸ್ಥೆಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ಶ್ಯಾಂಪ್ರಸಾದ್‌ ತಿಳಿಸಿದರು.

ಗುರುವಾರ ಸಂಸ್ಥೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.5ರಿಂದ 13ರವರೆಗೆ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಯಲಿದೆ. ಆಫ್‌ಲೈನ್‌ನಲ್ಲಿ ನ.6 ಹಾಗೂ 13ರಂದು ನಡೆಯಲಿದೆ. ಪರೀಕ್ಷಾ ಶುಲ್ಕ ಇರುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

13ನೇ ಆಂತೆ ಆವೃತ್ತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಶೇ 100ರಷ್ಟು ಸ್ಕಾಲರ್‌ಶಿಪ್‌ ಪಡೆಯಬಹುದು. 5 ವಿದ್ಯಾರ್ಥಿಗಳು ಎಲ್ಲ ವೆಚ್ಚಸಹಿತ ನಾಸಾ ಪ್ರವಾಸ ಮಾಡುವ ಅವಕಾಶ ಪಡೆಯುತ್ತಾರೆ. ಕಳೆದ ವರ್ಷ 13 ಲಕ್ಷ ವಿದ್ಯಾರ್ಥಿಗಳು ಆಂತೆ ಪರೀಕ್ಷೆಗೆ ಹಾಜರಾಗಿದ್ದರು. ಈ ವರ್ಷ 20 ಲಕ್ಷ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

‘ಶಿಕ್ಷಣ ಎಲ್ಲರಿಗೂ’ ಎಂಬ ಘೋಷ ವಾಕ್ಯದಡಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಬೈಜೂಸ್‌ ಆಕಾಶ್ ಸಂಸ್ಥೆಯು 2,000 ಹೆಣ್ಣು ಮಕ್ಕಳಿಗೆ ಉಚಿತವಾಗಿ ನೀಟ್‌ ಹಾಗೂ ಜೆಇಇ ಕೋಚಿಂಗ್ ಜತೆಗೆ ಸ್ಕಾಲರ್‌ಶಿಪ್‌ ನೀಡುತ್ತಿದೆ. ಆರ್ಥಿಕವಾಗಿ ಹಿಂದುಳಿದವರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೀಟ್ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದ ವ್ರಜೇಶ್‌ ಶೆಟ್ಟಿ, ವೃಶಾನ್ ಶೆಟ್ಟಿ, ನಿಖಿಲ್ ವಿಕ್ರಂ, ಪ್ರಾಪ್ತಿ ಭಂಡಾರಿ ಹಾಗೂ ಶಾರ್ವರಿ ಐತಾಳ್ ಅವರನ್ನು ಸನ್ಮಾನಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಬ್ರಾಂಚ್ ಮ್ಯಾನೆಜರ್ ವಿಮರ್ಶ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT