ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಶೇಷ ಮಕ್ಕಳ ಬದುಕು ರೂಪಿಸುವ ವಿಶೇಷ ಶಾಲೆಗಳು’

ನಾರಾಯಣ ವಿಶೇಷ ಮಕ್ಕಳ ಶಾಲೆಯ 15ನೇ ವಾರ್ಷಿಕೋತ್ಸವ ಮತ್ತು ನೂತನ ತೆರಪಿ ಕೊಠಡಿ ಉದ್ಘಾಟನೆ
Last Updated 29 ಮಾರ್ಚ್ 2023, 16:20 IST
ಅಕ್ಷರ ಗಾತ್ರ

ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಿತ ನಾರಾಯಣ ವಿಶೇಷ ಮಕ್ಕಳ ಶಾಲೆಯ 15 ವರ್ಷದ ವಾರ್ಷಿಕೋತ್ಸವ ಮತ್ತು ನೂತನ ತೆರಪಿ ಕೊಠಡಿಯ ಉದ್ಘಾಟನೆ ಈಚೆಗೆ ನಡೆಯಿತು.

ಮಣಿಪಾಲ್ ಕಾಲೇಜ್ ಆಫ್‌ ಹೆಲ್ತ್ ಪ್ರೊಫೆಷನ್‌ ಡೀನ್‌ ಡಾ.ಜಿ.‌ಅರುಣ್ ಮಯ್ಯ ತೆರಪಿ ಕೊಠಡಿಯ ಉದ್ಘಾಟಿಸಿ ಮಾತನಾಡಿ, ವಿಶೇಷ ಶಾಲೆಗಳು ವಿಶೇಷ ಮಕ್ಕಳಿಗೆ ಉತ್ತಮ ಬದುಕು ರೂಪಿಸಲು ಸಹಕಾರಿಯಾಗಿವೆ. ಪೋಷಕರು ಸೂಕ್ತ ಸಮಯದಲ್ಲಿ ಮಕ್ಕಳಲ್ಲಿರುವ ವೈಕಲ್ಯ ದೋಷ ಗುರುತಿಸಿ ತರಬೇತಿ ಕೊಡಿಸಿದರೆ ಸಾಮಾನ್ಯರಂತೆ ಜೀವನ ನಡೆಸಲು ಸಾಧ್ಯವಾಗಲಿದೆ ಎಂರು.

ಹಿರಿಯ ವಕೀಲ ಎ.ಎಸ್.ಎನ್.ಹೆಬ್ಬಾರ್‌ ಮಾತನಾಡಿ, ಪೋಷಕರಿಗೆ ವಿಶೇಷ ಮಕ್ಕಳನ್ನು ನೋಡಿಕೊಳ್ಳುವಲ್ಲಿ ತಾಳ್ಮೆ, ಆತ್ಮಸ್ಥೈರ್ಯ ಮುಖ್ಯ. ವಿಶೇಷ ಮಗುವನ್ನು ಉನ್ನತ ವ್ಯಕ್ತಿಯಾಗಿ ರೂಪಿಸುವ ಸಂಕಲ್ಪ ಮಾಡಬೇಕು. ಪೋಷಕರು ಎದೆಗುಂದದೆ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು. ಸುರೇಶ್ ತಲ್ಲೂರು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮತ್ತು ಶಾಲೆ ಕಳೆದ 15 ವರ್ಷಗಳಲ್ಲಿ ನಡೆದುಕೊಂಡು ಬಂದ ದಾರಿಯ ಬಗ್ಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಬೆಳಕು ಚೆಲ್ಲಿದರು. ಎಸ್‌ಡಿಎಂಸಿ ಅಧ್ಯಕ್ಷ ವಿನಯಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೊದಲ ರ್‍ಯಾಂಕ್ ಪಡೆದ ಶಿಕ್ಷಕಿ ಪ್ರತಿಮಾ ಎಸ್.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ತಲ್ಲೂರು ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರತಿಭಾನ್ವಿತರನ್ನು ಗೌರವಿಸಲಾಯಿತು. ಆಡಳಿತಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಪ್ರೇಮಾ ಲೂಯಿಸ್ ವರದಿ ವಾಚಿಸಿದರು. ಟ್ರಸ್ಟಿ ವಸಂತ ಶಾನುಭೋಗ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ವಿಶೇಷ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT