ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳಲ್ಲಿ ದೈಹಿಕ ಕ್ಷಮತೆ ವೃದ್ಧಿಸುವ ಕುಸ್ತಿ: ಕಿರಣ್‌ ಕುಮಾರ್ ಕೊಡ್ಗಿ

Published : 11 ಆಗಸ್ಟ್ 2024, 14:18 IST
Last Updated : 11 ಆಗಸ್ಟ್ 2024, 14:18 IST
ಫಾಲೋ ಮಾಡಿ
Comments

ಕುಂದಾಪುರ: ಪರಿಶ್ರಮದಿಂದ ಸಾಮರ್ಥ್ಯ ವೃದ್ಧಿಯಾಗುತ್ತದೆ. ದೇಶೀಯ ಕ್ರೀಡೆಯಾದ ಕುಸ್ತಿ ಮಕ್ಕಳಲ್ಲಿ ದೈಹಿಕ ಕ್ಷಮತೆ ತರುವಲ್ಲಿ ಸಹಾಯಕ ಎಂದು ಶಾಸಕ ಎ. ಕಿರಣ್‌ ಕುಮಾರ್ ಕೊಡ್ಗಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಜಿ. ಟೂರ್ನಿಯ ಇಲಾಖೆ ನಿಯಮಗಳನ್ನು ಪ್ರಸ್ತಾವಿಸಿದರು. ಕೋಟೇಶ್ವರ ಸರ್ಕಾರಿ ಪಬ್ಲಿಕ್ ಸ್ಕೂಲ್ ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ಸುಶೀಲಾ ಹೊಳ್ಳ, ಉದ್ಯಮಿ ವತ್ಸಲಾ ದಯಾನಂದ್ ಶೆಟ್ಟಿ, ಕುಂದಾಪುರ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಜಿಲ್ಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿಶನ್ ರಾಜ್ ಶೆಟ್ಟಿ ಇದ್ದರು.

ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು. ಮಂಜುನಾಥ್ ಹೊಳ್ಳ ವಂದಿಸಿದರು. ಶಿಕ್ಷಕಿ ಅನುರಾಧ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ. ವಿಜೇತರ ಪಟ್ಟಿ ವಾಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT