ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಇಂದು ಪ್ರಶಸ್ತಿ

Last Updated 4 ಸೆಪ್ಟೆಂಬರ್ 2021, 14:01 IST
ಅಕ್ಷರ ಗಾತ್ರ

ಉಡುಪಿ: ಸೆ.5ರಂದು ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ನಡೆಯಲಿದ್ದು, ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಡಿಡಿಪಿಐ ಎನ್‌.ಎಚ್‌.ನಾಗೂರ ತಿಳಿಸಿದ್ದಾರೆ.

ಪ್ರಶಸ್ತಿ ವಿಜೇತರು: ಕಿರಿಯ ಪ್ರಾಥಮಿಕ ವಿಭಾಗ–ಯಡ್ತಾಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶಾಂತಾ ಪೈ, ಕಿಸ್ಮತಿ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕ ಶೇಖರ ಗಾಣಿಗ, ಕುಚ್ಚೂರು ಶಾಲೆಯ ಸಹ ಶಿಕ್ಷಕ ಮಂಜುನಾಥ ಶೆಟ್ಟಿ, ಕೊಂಜಾಡಿ ಶಾಲೆಯ ಸಹ ಶಿಕ್ಷಕ ಸುರೇಶ್ ಶೆಟ್ಟಿ, ಕುದಿ ಶಾಲೆಯ ಸಹ ಶಿಕ್ಷಕಿ ಎಂ.ಎನ್‌. ರೇಷ್ಮಾ.

ಹಿರಿಯ ಪ್ರಾಥಮಿಕ ವಿಭಾಗ: ಬಡಾನೆಡಿಯೂರು ಶಾಲೆಯ ಮುಖ್ಯ ಶಿಕ್ಷಕ ದಿನಕರ ಶೆಟ್ಟಿ, ಶಿರೂರು ಶಾಲೆಯ ಸಹ ಶಿಕ್ಷಕ ಚಂದ್ರ ನಾರಾಯಣ ಬಿಲ್ಲವ, ಕಾಬೆಟ್ಟು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನರೇಂದ್ರ ಕಾಮತ್, ಪಾದೂರು ಶಾಲೆಯ ಮುಖ್ಯ ಶಿಕ್ಷಕಿ ಶೈಲಿ ಪ್ರೇಮ ಕುಮಾರಿ, ಅಲ್ಬಾಡಿ ಆರ್ಡಿ ಶಾಲೆಯ ಸಹ ಶಿಕ್ಷಕ ಗಣೇಶ್ ಹೆರಳೆ, ಶೇಡಿಮನೆ ಶಾಲೆಯ ಸಹ ಶಿಕ್ಷಕ ಶ್ರೀನಿವಾಸ.

ಪ್ರೌಢಶಾಲಾ ವಿಭಾಗ: ಮುದ್ರಾಡಿ ಎಂಎನ್‌ಡಿಎಸ್‌ಎಂ ಶಾಲೆಯ ಪಿ.ವಿ.ಆನಂದ ಸಾಲಿಗ್ರಾಮ, ಹೆಸ್ಕತ್ತೂರು ಶಾಲೆಯ ಮುಖ್ಯ ಶಿಕ್ಷಕ ಶಂತೋಷ್ ಕುಮಾರ್ ಶೆಟ್ಟಿ, ಕಟಪಾಡಿ ಎಸ್‌ವಿಎಸ್‌ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ತಂತ್ರಿ, ನಾವುಂದ ಶಾಲೆಯ ಸಹ ಶಿಕ್ಷಕ ಪಿ.ಕೃಷ್ಣಮೂರ್ತಿ, ಕೋಟ ವಿವೇಕ ಬಾಲಕಿಯರ ಶಾಲೆಯ ನರೇಂದ್ರ ಕುಮಾರ್, ಮಟಪಾಡಿ ಶ್ರೀನಿಕೇತನ ಅನುದಾನಿತ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಿ.ಬಿ.ಪ್ರವೀಣ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಪ್ರಶಸ್ತಿ ವಿಜೇತ ಜಿಲ್ಲೆಯ 17 ಶಿಕ್ಷಕರು, 43 ಮಂದಿ ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಕಚೇರಿಯ ಉಸ್ತುವಾರಿ ಅಧಿಕಾರಿಗಳು ಮಾತ್ರ ಭಾಗವಹಿಸಲು ಅವಕಾಶವಿದ್ದು, ಕೋವಿಡ್ ಮಾರ್ಗಸೂಚಿಯಂತೆ ಸಮಾರಂಭ ನಡೆಯಲಿದೆ. ಸ್ನೇಹಿತರು, ಬಂಧುಗಳನ್ನು ಕರೆತರಲು ಅವಕಾಶವಿಲ್ಲ. ಕಾರ್ಯಕ್ರಮಕ್ಕೆ ಆಗಮಿಸುವರು ಗುರುತಿನ ಚೀಟಿಯೊಂದಿಗೆ ಮಾಸ್ಕ್ ಧರಿಸಿ ಬರಬೇಕು ಎಂದು ಡಿಡಿಪಿಐ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT