ವಿಪತ್ತು ನಿರ್ವಹಣೆಗೆ ಗ್ರಾ.ಪಂ ಮಟ್ಟದಲ್ಲಿ ತಂಡ

7
ತಂಡದಲ್ಲಿ ಸ್ಥಳೀಯರು ಪಾಲ್ಗೊಳ್ಳಿ: ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಮನವಿ

ವಿಪತ್ತು ನಿರ್ವಹಣೆಗೆ ಗ್ರಾ.ಪಂ ಮಟ್ಟದಲ್ಲಿ ತಂಡ

Published:
Updated:
Deccan Herald

ಉಡುಪಿ: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಂಡ ರಚಿಸಿದ್ದು, ಆದರಲ್ಲಿ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ತಿಳಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶ್ವ ವಿಪತ್ತು ತಗ್ಗಿಸುವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಮತ್ತು ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವಕರ ಪಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹೆಚ್ಚು ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಬೇಕು. ವಿಕೋಪ ತಡೆಯುವ ನಿಟ್ಟಿನಲ್ಲಿ ಆಯಾ ಗ್ರಾಮ ಪಂಚಾಯ್ತಿ ಪಿ.ಡಿ.ಒಗಳ ಜತೆ ಚರ್ಚೆ ಮಾಡಬೇಕು. ಪೂರ್ವ ಸಿದ್ಧತೆಗಳಿಂದ ಮಾತ್ರ ಪ್ರಾಕೃತಿಕ ವಿಕೋಪದಿಂದ ಆಗುವ ಹಾನಿಯನ್ನು ಕಡಿಮೆ ಮಾಡಬಹುದು ಎಂಬ ವಿಚಾರವನ್ನು ಗ್ರಾಮಸ್ಥರಲ್ಲಿ ಅರಿವು ಮೂಡಿಸಬೇಕು ಎಂದರು.

ಹೆಚ್ಚು ಶಿಕ್ಷಿತರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ ಯುವ ಜನತೆ, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕುತೂಹಲಕ್ಕಾಗಿ ಆರಂಭವಾಗುವ ಮಾದಕ ದ್ರವ್ಯ ಸೇವನೆ ಮುಂದೆ ವ್ಯಸನವಾಗಿ ಬದಲಾಗಿ, ಭವಿಷ್ಯವನ್ನೇ ನಾಶ ಮಾಡುತ್ತದೆ. ಆತ್ಮಹತ್ಯೆಗೂ ಪ್ರಚೋದನೆ ನೀಡುತ್ತದೆ. ದುಶ್ಚಟಗಳ ವಿರುದ್ಧ ಯುವ ಜನತೆ ಹೋರಾಡಬೇಕು ಎಂದು ಸಲಹೆ ನೀಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ವಿಪತ್ತು ತಂಡದ ಮುಖ್ಯಸ್ಥ ಡಾ.ಕುಮಾರ್, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಡಾ.ಉಮೇಶ್ ಪ್ರಭು ಸ್ವಾಗತಿಸಿದರು. ಉಪ ಸಭಾಪತಿ ಡಾ.ಅಶೋಕ್ ಕುಮಾರ್, ಗೌರವ ಖಜಾಂಚಿ ಟಿ.ಚಂದ್ರಶೇಖರ್, ಯುವ ರೆಡ್‌ಕ್ರಾಸ್ ಘಟಕದ ಜಯರಾಮ್ ಆಚಾರ್ಯ ಸಾಲಿಗ್ರಾಮ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !