ಉಡುಪಿ: ಆಂಧ್ರಪ್ರದೇಶದಲ್ಲಿ ಪರಿಶಿಷ್ಟ ಜಾತಿಯ ಯುವಕನ ಮೇಲಿನ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ತೆಲುಗು ನಿರ್ಮಾಪಕ, ನಿರ್ದೇಶಕ ನೂತನ್ ನಾಯ್ಡು ಎಂಬಾತನ್ನು ಈಚೆಗೆ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಆರೋಪಿ ನೂತನ್ ನಾಯ್ಡು ರೈಲಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದಾನೆ ಎಂಬ ಆಂಧ್ರ ಪೊಲೀಸರ ಮಾಹಿತಿ ಮೇಲೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಆರೋಪಿಯನ್ನು ಗುರುವಾರ ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದರು.

ಅಷ್ಟರಲ್ಲಾಗಲೇ ಮಂಗಳೂರಿನಲ್ಲಿದ್ದ ಆಂಧ್ರ ಪೊಲೀಸರು, ಉಡುಪಿಗೆ ಬಂದು ಆರೋಪಿಯನ್ನು ವಶಕ್ಕೆ ಪಡೆದರು. ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಿ ಆಂಧ್ರಕ್ಕೆ ಕಳಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.

ಗಾಂಜಾ ಮಾರಾಟ: ಬಂಧನ
ಕೆಳಾರ್ಕಳ ಬೆಟ್ಟು ಗ್ರಾಮದ ನೇಜಾರು ಮಸೀದಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರ್ಫನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 1 ಕೆ.ಜಿ 48 ಗ್ರಾಂ ಗಾಂಜಾ, ಬೈಕ್, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.ಸೆನ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.