ಉಡುಪಿ: ದೇಶದಲ್ಲಿ 1975ರಲ್ಲಿ ಘೋಷಿಸಿದ್ದ ತುರ್ತು ಪರಿಸ್ಥಿತಿಯು ಎಂದೂ ಮರೆಯಲಾರದ ಕರಾಳ ದಿನವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಸಂವಿಧಾನ್ ಹತ್ಯಾ ದಿವಸ್’ (ತುರ್ತು ಪರಿಸ್ಥಿತಿಯ ಕರಾಳ ದಿನ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಯುದ್ದ ಮೊದಲಾದ ಘಟನೆಗಳು ಘಟಿಸುವಾಗ ಘೋಷಿಸಬೇಕಾಗಿದ್ದ ಆಂತರಿಕ ತುರ್ತು ಪರಿಸ್ಥಿತಿಯನ್ನು ಅಂದು ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಸಂವಿಧಾನದ 352 ನೇ ಕಲಂ ಅನ್ನು ದುರುಪಯೋಗ ಮಾಡಿ ಘೋಷಿಸಿದ್ದರು ಎಂದರು.

ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟ ಮಾಡಿದ 36 ಸಾವಿರ ಮಂದಿ ಮುಖಂಡರನ್ನು ಜೈಲಿಗೆ ಅಟ್ಟಲಾಯಿತು. ಉಡುಪಿಯಲ್ಲಿ ವಿ.ಎಸ್. ಆಚಾರ್ಯ ಮೊದಲಾದವರನ್ನು ಬಂಧಿಸಲಾಗಿತ್ತು ಎಂದೂ ಹೇಳಿದರು.

ತುರ್ತು ಪರಿಸ್ಥಿತಿಯ ವೇಳೆ ದೇಶದ ಜನರು ಅನುಭವಿಸಿದ ಸಂಕಷ್ಟ ಇನ್ನೆಂದೂ ಮರುಕಳಿಸಬಾರದು. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನ್ಯಾಯಾಂಗ, ಕಾರ್ಯಾಂಗ ಶಾಸಕಾಂಗಗಳನ್ನು ಸಂರಕ್ಷಣೆ ಮಾಡುತ್ತಿದ್ದಾರೆ ಎಂದರು.

ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜಿಲ್ಲೆಯಲ್ಲೂ ಹೋರಾಟ ಮಾಡಿ ಜೈಲು ಸೇರಿದ್ದ ಹೋರಾಟಗಾರರ ಪಟ್ಟಿ ತಯಾರಿಸುವ ಕೆಲಸವನ್ನು ಮಂಡಲ ವ್ಯಾಪ್ತಿಯಲ್ಲಿ ಮಾಡಲಾಗುವುದು ಎಂದು ಹೇಳಿದರು.

ಶಾಸಕ ಯಶ್ಪಾಲ್ ಸುವರ್ಣ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ನಿರೂಪಿಸಿದರು. ಹೆರ್ಗ ದಿನಕರ ಶೆಟ್ಟಿ ಸ್ವಾಗತಿಸಿದರು.

ಇಂದು ದೇಶದೆಲ್ಲೆಡೆ ಕಾಂಗ್ರೆಸ್ನವರು ಸಂವಿಧಾನದ ಪುಸ್ತಕವನ್ನು ಹಿಡಿದು ತಿರುಗಾಡುತ್ತಿದ್ದಾರೆ ಆದರೆ ಅವರದೇ ಪಕ್ಷದ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಮೂಲಕ ಸಂವಿಧಾನದ ಕಗ್ಗೊಲೆ ಮಾಡಿದ್ದರು.
– ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ

‘ರಾಜ್ಯ ಸರ್ಕಾರ ದಿವಾಳಿಯಾಗಿದೆ’

ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳನ್ನು ಜಾರಿಗೊಳಿಸಲೂ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ರಾಜ್ಯದ ಪಾಲನ್ನು ನೀಡದ ಕಾರಣ ಕೇಂದ್ರ ಸರ್ಕಾರದ ಹಲವು ಯೋಜನೆಗಳು ಕುಂಠಿತವಾಗಿವೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು ಅನುದಾನ ಕೊರತೆ ಮತ್ತು ಆಂತರಿಕ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. 23 ಲಕ್ಷ ಬಡವರ ಪಿಂಚಣಿಯನ್ನು ವಜಾ ಮಾಡುವ ತಂತ್ರ ನಡೆಯುತ್ತಿದೆ ಎಂಬುದು ಜನರಿಗೆ ಮನವರಿಕೆಯಾಗಿದೆ. ನಾವು ಸರ್ಕಾರದ ಲೋಪವನ್ನು ಜನರ ಮುಂದಿರಿಸುತ್ತಿದ್ದೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.