ಮಂಗಳವಾರ, ಮಾರ್ಚ್ 9, 2021
29 °C

ಉಡುಪಿ: ನಾಲ್ಕು ಅನಾಥ ಶವಗಳ ಅಂತ್ಯಸಂಸ್ಕಾರ, ನಾಗರಿಕ ಸಮಿತಿಯಿಂದ ಅಂತ್ಯಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ವಾರಸುದಾರರು ಪತ್ತೆಯಾಗದ ನಾಲ್ಕು ಅನಾಥ ಶವಗಳ ಅಂತ್ಯ ಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ನೆರವೇರಿಸಿದರು.

ಅನಾರೋಗ್ಯದಿಂದ ಈಚೆಗೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ವ್ಯಕ್ತಿಗಳು ಮೃತಪಟ್ಟಿದ್ದರು. ಶವಗಳನ್ನು ವಾರಸುದಾರರ ಬರುವಿಕೆಗಾಗಿ ಶವಾಗಾರದಲ್ಲಿ ಇಡಲಾಗಿತ್ತು. ಕಾಯುವಿಕೆ ಕಾಲಮಿತಿ ಕಳೆದರೂ ಯಾರೂ ಬಾರದಿರುವುದರಿಂದ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್‌ನ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಮುಂದೆ ನಿಂತು ಅಂತ್ಯಸಂಸ್ಕಾರ ನಡೆಸಿದರು.

ನಗರ ಪೊಲೀಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ, ಸಮಾಜಸೇವಕ ವಿಶುಶೆಟ್ಟಿ ಅಂಬಲಪಾಡಿ, ಗಣೇಶ್, ಸುಮಿತ್ರಾ ರಾವ್ ಅಂತ್ಯಕ್ರಿಯೆಗೆ ನೆರವಾದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು