ಶನಿವಾರ, ಏಪ್ರಿಲ್ 1, 2023
31 °C

ಪುನೀತ್‌ಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಗ್ರಹ ಕೇಳಿಬಂದಿತ್ತು: ಸುನಿಲ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಆದರೆ ನಿಯಮಾವಳಿ ಹಾಗೂ ನ್ಯಾಯಾಲಯದ ಆದೇಶದ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಅವಕಾಶ ಇಲ್ಲವಾದ್ದರಿಂದ ಪುನೀತ್ ಹೆಸರನ್ನು ಪ್ರಶಸ್ತಿಗೆ ಪರಿಗಣಿಸಲಾಗಲಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಪುನೀತ್ ಸರ್ಕಾರದ ಜಾಹೀರಾತುಗಳಲ್ಲಿ ಉಚಿತವಾಗಿ ನಟಿಸಿದ್ದಾರೆ. ಅವರ ಸೇವೆ ಪರಿಗಣಿಸಿ ಮುಂದೆ, ಯಾವ ರೀತಿಯ ಗೌರವ ಸಲ್ಲಿಸಬೇಕು ಎಂದು ಸರ್ಕಾರ ಶೀಘ್ರವೇ ನಿರ್ಧರಿಸಲಿದೆ ಎಂದು ಸಚಿವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು