ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ತೂರು: ಮನೆ ಬಾಗಿಲು ಮುರಿದು ಆಭರಣ ಕಳವು

Published 13 ಮೇ 2024, 13:37 IST
Last Updated 13 ಮೇ 2024, 13:37 IST
ಅಕ್ಷರ ಗಾತ್ರ

ಹೆಬ್ರಿ: ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕಳ್ತೂರಿನಲ್ಲಿ ನಡೆದಿದೆ.

ಗ್ಯಾರೇಜ್‌ ಒಂದರಲ್ಲಿ ಕೆಲಸ ಮಾಡಿಕೊಂಡಿರುವ ರಾಕೇಶ್ (31) ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ರಾಕೇಶ್‌ ಅವರು ಪತ್ನಿ ಜೊತೆ ಅವರ ತವರು ಮನೆಗೆ ಕಾರ್ಯಕ್ರಮಕ್ಕೆಂದು ಹೋಗಿದ್ದರು.

ಬುಧವಾರ ಮಧ್ಯಾಹ್ನ 3:30ಕ್ಕೆ ಮನೆಗೆ ವಾಪಸು ಬಂದಾಗ ಕೃತ್ಯ ಗಮನಕ್ಕೆ ಬಂದಿದೆ. ಮನೆಯ ಬಾಗಿಲು ಮುರಿದಿದ್ದು, ಒಳಗೆ ಹೋಗಿ ನೋಡಿದಾಗ ಕಪಾಟಿನ ಬಾಗಿಲು ಮುರಿದು ಅದರಲ್ಲಿದ್ದ ₹3.75 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT