ಶುಕ್ರವಾರ, ಮೇ 29, 2020
27 °C
53ಕ್ಕೇರಿದ ಸೋಂಕಿತರ ಸಂಖ್ಯೆ: 853 ಮಂದಿ ಮಾದರಿ ರವಾನೆ

ಉಡುಪಿ | ಜಿಲ್ಲೆಯಲ್ಲಿ ಮೂವರಿಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಮೂವರಲ್ಲಿ ಕೋವಿಡ್ -19 ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದಿದ್ದ 34 ವರ್ಷದ ಮಹಿಳೆ ಹಾಗೂ 40 ಹಾಗೂ 49 ವರ್ಷದ ಪುರುಷರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕ್ವಾರಂಟೈನ್‌ನಲ್ಲಿದ್ದ ಮೂವರು ಸೋಂಕಿತರನ್ನು ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಜತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

853 ಮಂದಿ ಮಾದರಿ ರವಾನೆ: ಕ್ವಾರಂಟೈನ್‌ನಲ್ಲಿದ್ದವರ ಹಾಗೂ ಶಂಕಿತ ಕೊರೊನಾ ಲಕ್ಷಣಗಳು ಕಂಡುಬಂದ 853 ಮಂದಿಯ ಗಂಟಲ ದ್ರವದ ಮಾದರಿಯನ್ನು ಶನಿವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 2,925 ವರದಿಗಳು ಬರುವುದು ಬಾಕಿ ಇದೆ. ಇದುವರೆಗೂ 5,703 ಮಂದಿಯ ಮಾದರಿ ಸಂಗ್ರಹಿಸಿ ಕಳುಹಿಸಲಾಗಿದೆ. ಶನಿವಾರ 339 ವರದಿಗಳು ನೆಗೆಟಿವ್ ಬಂದಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

21 ಮಂದಿ ಆಸ್ಪತ್ರೆಗೆ ದಾಖಲು: ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ 10 ಪುರುಷರು ಹಾಗೂ 11 ಮಹಿಳೆಯರು ಸೇರಿ 21 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ಪೈಕಿ ತೀವ್ರ ಉಸಿರಾಟದ ಸಮಸ್ಯೆ ಇರುವವರು ಐದು, ಶಂಕಿತ ಕೊರೊನಾ ಲಕ್ಷಣಗಳು ಇರುವ 6, ಐಎಲ್‌ಐ ಲಕ್ಷಣ ಇರುವ 10 ಮಂದಿ ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು