ಮಂಗಳವಾರ, ಜೂನ್ 28, 2022
25 °C

ಹಿಜಾಬ್‌ಗಾಗಿ ಹೋರಾಟ: ಶನಿವಾರವೂ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ.

ಆಲ್ಮಾಸ್, ಹಾಜ್ರಾ ಶಿಫಾ ಹಾಗೂ ಆಯಿಶಾ ಪರೀಕ್ಷೆಗೆ ಗೈರಾದವರು. 

ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಮೂವರ ಪೈಕಿ ಆಲ್ಮಾಸ್ ಶುಕ್ರವಾರ ಕಾಲೇಜಿಗೆ ಬಂದು ಪ್ರವೇಶ ಪತ್ರ ಪಡೆದುಕೊಂಡಿದ್ದರು. ಉಳಿದ ಇಬ್ಬರು ಪಡೆದುಕೊಂಡಿರಲಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ತಿಳಿಸಿದರು.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣಕ್ಕೆ ಶುಕ್ರವಾರ ಆಲಿಯಾ ಅಸಾದಿ ಹಾಗೂ ರೇಶಮ್ ಪರೀಕ್ಷೆ ಬಹಿಷ್ಕರಿಸಿದ್ದರು.

ಓದಿ... ಪತ್ನಿಗೆ ಸಂತಾನ ಭಾಗ್ಯ ಕರುಣಿಸಲು ಕೈದಿಗೆ 15 ದಿನ ಪೆರೋಲ್ ಮಂಜೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು