ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನ ಮುಂದೆ ಟಿಕ್‌ ಟಾಕ್: ಇಬ್ಬರ ಬಂಧನ, ಬಿಡುಗಡೆ

Last Updated 15 ಏಪ್ರಿಲ್ 2019, 15:04 IST
ಅಕ್ಷರ ಗಾತ್ರ

ಉಡುಪಿ: ಇಂದ್ರಾಳಿಯಲ್ಲಿರುವ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನ ಮುಂದೆ ಟಿಕ್‌ ಟಾಕ್ ವಿಡಿಯೋಗೆ ನೃತ್ಯ ಮಾಡುತ್ತಿದ್ದ ಇಬ್ಬರು ಯುವಕರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ಫ್ಲಾಟ್‌ಪಾರಂಗೆ ರೈಲು ಬರುತ್ತಿದ್ದಂತೆ ಯುವಕರು ರೈಲಿನ ಜತೆಗೆ ಸಾಗುತ್ತಾ ವಿಡಿಯೋ ಚಿತ್ರೀಕರಣ ಮಾಡಲು ಶುರುಮಾಡಿದರು. ಜತೆಗೆ, ರೈಲಿನ ಪಕ್ಕ ನಿಂತು ಸೆಲ್ಫಿ ತೆಗೆದುಕೊಂಡರು. ಈ ಸಂದರ್ಭ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿ, ಸೋಮವಾರ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಯುವಕರಿಗೆ ದಂಡ ವಿಧಿಸಿದ ನ್ಯಾಯಾಧೀಶರು, ಮುಂದೆ ಹುಡುಗಾಟಿಕೆಯ ಕೆಲಸಗಳನ್ನು ಮಾಡದಂತೆ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದರು ಎಂದು ರೈಲ್ವೆ ಪೊಲಿಸರು ತಿಳಿಸಿದ್ದಾರೆ.

ರೈಲು ಚಲಿಸುತ್ತಿದ್ದಾಗ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು, ನೃತ್ಯ ಮಾಡುವುದು ಕಾನೂನಿಗೆ ವಿರುದ್ಧ. ಪ್ರಾಣಕ್ಕೆ ಕುತ್ತು ತರುವಂತಹ ಇಂತಹ ಕೆಲಸಗಳನ್ನು ಮಾಡಬಾರದು ಎಂದು ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT