ಶುಕ್ರವಾರ, ಡಿಸೆಂಬರ್ 2, 2022
20 °C

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಲ್ಪೆ ಬೀಚ್‌ನಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಬೆಂಗಳೂರಿನ ನಾಗಸಂದ್ರದ ಪ್ರದೀಪ್, ನಾಗೇಶ್‌ ವೆಂಕಟೇಶನ್ ಹಾಗೂ ರಮೇಶ್‌ ಪ್ರಾಣಾಪಾಯದಿಂದ ಪಾರಾದವರು. ಮೂವರು ಪ್ರವಾಸಕ್ಕೆ ಬಂದು ನೀರಿಗಿಳಿದು ಈಜುವಾಗ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದರು. ಇದನ್ನು ಗಮನಿಸಿದ ಲೈಫ್‌ ಗಾರ್ಡ್ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ ರಕ್ಷಣೆ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.