ಕುಂದಾಪುರ: ‘ತಂತ್ರಜ್ಞಾನದ ಬೆಳವಣಿಗೆ, ಯಂತ್ರಗಳ ಬಳಕೆ ನಡುವೆ ಸಾಂಪ್ರದಾಯಿಕ ಕೃಷಿ ಎಲ್ಲಿ ಮಾಯವಾಗುತ್ತದೆ ಎನ್ನುವ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಸಾಂಪ್ರದಾಯಿಕ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಶ್ಲಾಘನೀಯ’ ಎಂದು ಶಾಸಕ ಎ.ಕಿರಣ್ಕುಮಾರ ಕೊಡ್ಗಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿನ ಮಂಗಲಪಾಂಡೆ ರಸ್ತೆ ವಾರ್ಡ್ನ ಕೋಟ್ಯಾನ್ ಕುಟುಂಬಸ್ಥರ ಗದ್ದೆಯಲ್ಲಿ ಶುಕ್ರವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕುಂದಾಪುರ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಕೃಷಿಯ ಕಡೆ ನಮ್ಮ ನಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಕುಂದಾಪುರದ ಅಧ್ಯಕ್ಷೆ ಪಿ.ಗುಣರತ್ನಾ, ಕಳೆದ 10 ವರ್ಷದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ‘ಕೃಷಿಯ ಕಡೆ ನಮ್ಮ ನಡೆ’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನಾ ಶೇಖರ್, ಸಂಪನ್ಮೂಲ ವ್ಯಕ್ತಿ ಸುನೀತಾ ಬಾಂಜ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರೇಖಾ ಕೆ.ಯು., ಸಮಾಜ ಸೇವಕ ಸತೀಶ್ ಮತ್ತು ಸುಮಿತ್ರಾ ಕೋಟ್ಯಾನ್, ಸಂಸ್ಥೆಯ ಉಪಾಧ್ಯಕ್ಷ ಕೆ.ಆರ್.ನಾಯಕ್, ಕೋಟ್ಯಾನ್ ಕುಟುಂಬಸ್ಥರು, ಸ್ಥಳೀಯ ಶಾಲೆಯ ಶಿಕ್ಷಕರು ಇದ್ದರು.

ಕುಂದಾಪುರ ವಲಯದ 7 ಶಾಲೆಗಳ 240 ವಿದ್ಯಾರ್ಥಿಗಳು ಸಾಂಪ್ರದಾಯಿಕ ಶೈಲಿಯಲ್ಲಿ ನೇಜಿಯನ್ನು ನೆಟ್ಟು ಸಂಭ್ರಮಿಸಿದರು. ಶಿಕ್ಷಕರು ಹಾಗೂ ಸ್ಥಳೀಯರಿಂದ ನೇಜಿ ನಾಟಿಯ ಬಗ್ಗೆ ಮಾರ್ಗದರ್ಶನ ಪಡೆದುಕೊಂಡರು.

ಶಿಕ್ಷಕಿ ತಾರದೇವಿ ಸ್ವಾಗತಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕಾರ್ಯದರ್ಶಿ ಅನಂದ ಅಡಿಗ ಪ್ರಸ್ತಾವಿಕವಾಗಿ ಮಾತನಾಡಿದರು. ಖಜಾಂಚಿ ವೀರೇಂದ್ರ ವಂದಿಸಿದರು. ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಶಾಲೆಯ ಸ್ಕೌಟ್ಸ್ ಶಿಕ್ಷಕ ಸದಾನಂದ ಶೆಟ್ಟಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.