ಕಲ್ಸಂಕ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಕೆ: ಸಿಟಿ ಬಸ್ ನಿಲ್ದಾಣ, ಕಡಿಯಾಳಿಯಲ್ಲಿ ವಾಹನಗಳ ಸಾಲು
ನವೀನ್ ಕುಮಾರ್ ಜಿ.
Published : 9 ಜೂನ್ 2025, 7:59 IST
Last Updated : 9 ಜೂನ್ 2025, 7:59 IST
ಫಾಲೋ ಮಾಡಿ
Comments
ಕಲ್ಸಂಕ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು
ಮಣಿಪಾಲ ಮತ್ತು ಕಲ್ಸಂಕ ಜಂಕ್ಷನ್‌ನಲ್ಲಿ ಹೆಚ್ಚು ವಾಹನ ದಟ್ಟಣೆ ಸಮಸ್ಯೆ ಕಾಡುತ್ತಿದ್ದು ಅಲ್ಲಿ ಸಿಗ್ನಲ್ ದೀಪಗಳನ್ನು ಅಳವಡಿಸಲು ಶೀಘ್ರ ಟೆಂಡರ್ ಕರೆಯಲಾಗುವುದು
ಪ್ರಭಾಕರ ಪೂಜಾರಿ ನಗರಸಭೆ ಅಧ್ಯಕ್ಷ
ಮಣಿಪಾಲ ಮತ್ತು ಕಲ್ಸಂಕ ಜಂಕ್ಷನ್‌ನಲ್ಲಿ ಹೆಚ್ಚು ವಾಹನ ದಟ್ಟಣೆ ಸಮಸ್ಯೆ ಕಾಡುತ್ತಿದ್ದು ಅಲ್ಲಿ ಸಿಗ್ನಲ್ ದೀಪಗಳನ್ನು ಅಳವಡಿಸಲು ಶೀಘ್ರ ಟೆಂಡರ್ ಕರೆಯಲಾಗುವುದು
ಪ್ರಭಾಕರ ಪೂಜಾರಿ ನಗರಸಭೆ ಅಧ್ಯಕ್ಷ
ಕಲ್ಸಂಕದಿಂದ ಬನ್ನಂಜೆವರೆಗೂ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದನ್ನು ನಿಯಂತ್ರಿಸಿದರೆ ಅರ್ಧದಷ್ಟು ವಾಹನ ದಟ್ಟಣೆ ಸಮಸ್ಯೆ ಪರಿಹಾರವಾಗಬಹುದು. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು
ನಿತ್ಯಾನಂದ ಒಳಕಾಡು ಸಾಮಾಜಿಕ ಕಾರ್ಯಕರ್ತ
‘ಅಧ್ಯಯನ ನಡೆಸಿ ಕ್ರಮ’
ಕಲ್ಸಂಕ ಜಂಕ್ಷನ್‌ನಲ್ಲಿ ವಾರಾಂತ್ಯದಲ್ಲಿ ಬ್ಯಾರಿಕೇಡ್ ಅಳವಡಿಸಲಾಗುತ್ತಿದ್ದು ಅದನ್ನು ಒಮ್ಮೆಲೇ ನಿಲ್ಲಿಸಲು ಸಾಧ್ಯವಿಲ್ಲ. ಸಮಸ್ಯೆಯ ಕುರಿತು ಅಧ್ಯಯನ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರವಾಗಿ ಶಾಸಕರ ಜೊತೆಗೆ ಸಭೆ ನಡೆದಿದೆ. ರಸ್ತೆ ಸುರಕ್ಷತಾ ಸಭೆಯಲ್ಲೂ ಈ ಕುರಿತು ಚರ್ಚಿಸಿ ಸಮರ್ಪಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಕಾಮಗಾರಿಯಿಂದಲೂ ವಾಹನ ದಟ್ಟಣೆ
ನಗರದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವುದರಿಂದಲೂ ವಾಹನ ದಟ್ಟಣೆ ಸಮಸ್ಯೆ ಕಾಡುತ್ತಿದೆ. ಅಂಬಲಪಾಡಿ ಬೈಪಾಸ್‌ನಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಎಲ್ಲಾ ವಾಹನಗಳು ಸರ್ವಿಸ್ ರಸ್ತೆಗಳಲ್ಲೇ ಸಂಚರಿಸುತ್ತಿವೆ. ಈ ಸರ್ವಿಸ್ ರಸ್ತೆ ಅಗಲ ಕಿರಿದಾಗಿರುವುದರಿಂದ ಆಗಾಗ ಇಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಘನ ವಾಹನಗಳು ಸಾಗುವ ಸಂದರ್ಭದಲ್ಲೂ ಇಲ್ಲಿ ಕೆಲವೊಮ್ಮೆ ವಾಹನ ದಟ್ಟಣೆ ಸಮಸ್ಯೆ ಕಾಡುತ್ತದೆ. ಇನ್ನು ಜೋರಾಗಿ ಮಳೆ ಬಂದಾಗ ಸರ್ವಿಸ್ ರಸ್ತೆ ಕೆರೆಯಂತಾಗುತ್ತದೆ. ಆಗ ವಾಹನಗಳು ನಿಧಾನ ಗತಿಯಲ್ಲಿ ಸಾಗಬೇಕಾಗುತ್ತದೆ. ಇನ್ನು ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಇನ್ನೂ ಪೂರ್ಣವಾಗದಿರುವುದೂ ವಾಹನ ಸವಾರರಿಗೆ ಸಮಸ್ಯೆ ತಂದೊಡ್ಡುತ್ತಿದೆ. ಮೇಲ್ಸೇತುವೆಯ ಗರ್ಡರ್ ಅಳವಡಿಸುವ ಕಾರ್ಯ ನಡೆದು ಹಲವು ದಿನಗಳು ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ.