ಗುರುವಾರ , ಆಗಸ್ಟ್ 11, 2022
23 °C
ಸೋಮವಾರ ಖಾಸಗಿ ಬಸ್‌ ಬಂದ್ ಇಲ್ಲ: ರಾಜ್ಯ ಖಾಸಗಿ ಬಸ್‌ ಮಾಲೀಕರ ಒಕ್ಕೂಟದ ಖಜಾಂಚಿ ಕುಯಿಲಾಡಿ ಸುರೇಶ್‌ ನಾಯಕ್

ಸಾರಿಗೆ ನೌಕರರ ಮುಷ್ಕರ: ದೀಡು ನಮಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಜ್ಯದಲ್ಲಿ ಸೋಮವಾರ ಖಾಸಗಿ ಬಸ್‌ಗಳ ಬಂದ್ ಇಲ್ಲ. ರಾಜ್ಯ ಖಾಸಗಿ ಬಸ್‌ ಮಾಲೀಕರ ಒಕ್ಕೂಟ ಬಂದ್‌ಗೆ ಕರೆ ನೀಡಿಲ್ಲ ಎಂದು ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್‌ ನಾಯಕ್ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ 4 ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಹಂತ ಹಂತವಾಗಿ ಬೇಡಿಕೆ ಈಡೇರಿಸುವ ವಿಶ್ವಾಸವಿದೆ. ಸರ್ಕಾರಕ್ಕೆ ಬೆಂಬಲವಾಗಿ ಖಾಸಗಿ ಬಸ್‌ಗಳು ನಿಂತಿದ್ದು, 8,500ಕ್ಕೂ ಹೆಚ್ಚು ಬಸ್‌ಗಳು ಓಡಾಡಲಿವೆ. ಬಂದ್‌ ಮಾಡುವುದಾಗಿ ಹೇಳಿರುವ ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ. ಪ್ರಯಾಣಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ದೀಡು ನಮಸ್ಕಾರ: ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿ ಭಾನುವಾರ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನೌಕರ ನಾಗೇಶ್‌ ಭೋವಿ ಎಂಬುವರು ದೀಡು ನಮಸ್ಕಾರ ಹಾಕುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಬಸ್‌ ನಿಲ್ದಾಣದಲ್ಲಿ ಬೆಳಿಗ್ಗೆ ತಲೆಯ ಮೇಲೆ ನೀರು ಸುರಿದುಕೊಂಡು ಬಸ್‌ ನಿಲ್ದಾಣದಿಂದ ಕೃಷ್ಣಮಠದವರೆಗೆ ನಾಗೇಶ್‌ ದೀಡು ನಮಸ್ಕಾರ ಹಾಕಿದರು. ಮತ್ತೊಂದೆಡೆ, ಭಾನುವಾರವೂ ಜಿಲ್ಲೆಯೊಳಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಇತ್ತು. ಹೊರ ಜಿಲ್ಲೆಗಳಿಂದ ಉಡುಪಿಗೆ ಬಸ್‌ಗಳು ಬರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು