‘ಪುನರ್ವಸತಿಗೆ ಅನುದಾನ ಮೀಸಲಿಡಿ’
‘ಕುದುರೆಮುಖ ರಾಷ್ಟ್ರೀಯ ಉದ್ಯಾನ ಪುನರ್ವಸತಿ ಯೋಜನೆ ಅಡಿಯಲ್ಲಿ ಸ್ವಇಚ್ಛೆಯಿಂದ ಅರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳ ಪುನರ್ವಸತಿಗಾಗಿ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡಿ ಪರಿಹಾರ ನೀಡಬೇಕು’ ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಆಗ್ರಹಿಸಿದ್ದಾರೆ. ಅರಣ್ಯ ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಿದರೆ ಸಾಲದು ಅವುಗಳು ಅನುಷ್ಠಾನಗೊಳ್ಳಬೇಕು. ಬುಡಕಟ್ಟು ಸಮುದಾಯದವರಿಗೆ ಮೂಲ ಸೌಲಭ್ಯಕ್ಕಾಗಿ ಹೆಚ್ಚಿನ ಅನುದಾನ ಮೀಸಲಿರಿಸಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕು ಎಂದೂ ಅವರು ಆಗ್ರಹಿಸಿದ್ದಾರೆ.