ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಪುನರ್ವಸತಿ ಕಾರ್ಯವು ಸದ್ಯ ಅನುದಾನ ಬಾರದ ಕಾರಣ ವಿಳಂಬವಾಗಿದೆ. ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿದ್ದೇವೆ. ಅನುದಾನ ಲಭಿಸಿದ ತಕ್ಷಣ ಪುನರ್ವಸತಿ ಕಾರ್ಯ ಆರಂಭಿಸಲಿದ್ದೇವೆ
ಶಿವರಾಮ್ ಬಾಬು ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್‌ಒ
ಮತ್ತಾವಿನಲ್ಲಿ ಸೇತುವೆ ನಿರ್ಮಿಸಲು ₹2 ಕೋಟಿ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ. ಟೆಂಡರ್ ಕರೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದೇವೆ. ಅವರು ಈ ಹಿಂದೆ ಪರಿವೇಶ್ ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈಗ 2.0 ಆ್ಯಪ್ ಬಂದಿರುವುದರಿಂದ ಮತ್ತೆ ಅರ್ಜಿ ಸಲ್ಲಿಸಬೇಕಾಗಿದೆ ಎನ್ನುತ್ತಿದ್ದಾರೆ