ಬುಧವಾರ, ಅಕ್ಟೋಬರ್ 23, 2019
27 °C
ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರ ಎಚ್ಚರಿಕೆ

‘ವಿನಾಶಕಾರಿ ಮೀನುಗಾರಿಕೆ ನಡೆಸಿದರೆ ಕ್ರಮ’

Published:
Updated:

ಉಡುಪಿ: ರಾಜ್ಯ ಸರ್ಕಾರ ಬುಲ್ ಟ್ರಾಲಿಂಗ್ ಹಾಗೂ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಿದೆ. ಮೀನುಗಾರರು ವಿನಾಶಕಾರಿ ಮೀನುಗಾರಿಕೆ ಮಾಡುವಂತಿಲ್ಲ. ನಿಯಮ  ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ಸಮುದ್ರದಲ್ಲಿ ಚೌರಿ, ಚಿಂದಿ ಬಲೆ, ಕೊಳೆಯುವ ವಸ್ತುಗಳು ಹಾಗೂ ಇನ್ನಿತರ ಸಮುದ್ರ ಮಾಲಿನ್ಯಕಾರಕ ವಸ್ತುಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಕಪ್ಪೆ ಬಂಡಾಸ್ ಮೀನು ಹಿಡಿಯುವುದಕ್ಕೆ ನಿಷೇಧವಿದೆ. ನಿಯಮ ಮೀರಿ ಮೀನುಗಾರಿಕೆ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.

ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಗರಿಷ್ಟ 350 ಅಶ್ವ ಶಕ್ತಿ ಎಂಜಿನ್ ಅಳವಡಿಸಲು ಅನುಮತಿ ಇದೆ. ಮೀನುಗಾರಿಕಾ ದೋಣಿಗಳಿಗೆ ಕಡ್ಡಾಯವಾಗಿ ಏಕರೂಪದ ಬಣ್ಣಹಚ್ಚಬೇಕು. ಟ್ರಾಲ್ ಮೀನುಗಾರಿಕೆ ದೋಣಿಗಳು ಕಡ್ಡಾಯವಾಗಿ 35 ಎಂ.ಎಂ ಅಳತೆಯ ಸ್ಕ್ವೇರ್ ಮೆಶ್ ಕಾಡ್ ಎಂಡ್ ಬಲೆಯನ್ನು ಉಪಯೋಗಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಪರ್ಸೀನ್ ಮತ್ತು ಔಟ್ ಬೋರ್ಡ್ ಎಂಜಿನ್ ಅಳವಡಿಸಿದ ಮೀನುಗಾರಿಕೆ ದೋಣಿಗಳು ಕಡ್ಡಾಯವಾಗಿ 20 ಎಂಎಂ ಅಳತೆಗಿಂತ ಸಣ್ಣ ಕಣ್ಣಿನ ಬಲೆಗಳನ್ನು ಉಪಯೋಗಿಸಬಾರದು. ಕರಾವಳಿ ತೀರ ಪ್ರದೇಶದಲ್ಲಿ ಪಚ್ಚಿಲೆ (ಗ್ರೀನ್ ಮಸಲ್) ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ಮೀನುಗಾರಿಕೆಯನ್ನು ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)