ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ.ವಿ ಮೊಬೈಲ್ ಗೀಳು ರಂಗಭೂಮಿಗೆ ಪೆಟ್ಟು

ಕಸ್ತೂರಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಪದ್ಮರಾಜ್ ಹೆಗ್ಡೆ
Last Updated 6 ಫೆಬ್ರುವರಿ 2023, 16:05 IST
ಅಕ್ಷರ ಗಾತ್ರ

ಉಡುಪಿ: ಸಾರ್ವಜನಿಕರಲ್ಲಿ ಟಿ.ವಿ. ಮೊಬೈಲ್‌ ಗೀಳು ಹೆಚ್ಚಾಗಿರುವ ಕಾರಣ ರಂಗಭೂಮಿಯಿಂದ ದೂರವಾಗುತ್ತಿದ್ದಾರೆ ಎಂದು ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಪದ್ಮರಾಜ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು.

ಉಡುಪಿ ತುಳುಕೂಟದ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಭಾನುವಾರ ನಡೆದ 21ನೇ ಕೆಮ್ತೂರು ತುಳು ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿ, ರಂಗಭೂಮಿಯತ್ತ ಸೆಳೆತ ಕಡಿಮೆಯಾಗುತ್ತಿರುವ ಕಾಲಘಟ್ಟದಲ್ಲೂ ಉಡುಪಿ ತುಳುಕೂಟ ಎರಡು ದಶಕಗಳಿಂದ ನಾಟಕೋತ್ಸವವನ್ನು ಯಶಸ್ವಿಯಾಗಿ ನಡೆಸುತ್ತ ರಂಗಭೂಮಿ ಉಳಿವಿಗೆ ಶ್ರಮಿಸುತ್ತಿದೆ ಎಂದರು.

ವಿಶ್ವದಾದ್ಯಂತ 18,50 ಲಕ್ಷಕ್ಕೂ ಹೆಚ್ಚು ಮಂದಿ ಮಾತನಾಡುವ ತುಳು ಭಾಷೆಗೆ ಸರ್ಕಾರ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡುವುದಕ್ಕೆ ಸಿದ್ದತೆಗಳನ್ನು ನಡೆಸಿರುವುದು ಸಂತಸದ ವಿಚಾರ. ತುಳುವರ ದಶಕದ ಕನಸು ಶೀಘ್ರ ಈಡೇರಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ತುಳು ಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ತುಳು ಜನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ದಾನಿ ವಿಶ್ವನಾಥ ಶೆಣೈ, ಉದ್ಯಮಿ ಪಿ. ಪುರುಷೋತ್ತಮ ಶೆಟ್ಟಿ, ಮನೋಹರ ಶೆಟ್ಟಿ, ಕೆಮ್ತೂರು ಕುಟುಂಬದ ವಿಜಯಕುಮಾರ್ ಶೆಟ್ಟಿ, ಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ., ನಾಟಕ ಸ್ಪರ್ಧೆಯ ಸಂಚಾಲಕ ಬಿ. ಪ್ರಭಾಕರ ಭಂಡಾರಿ ಇದ್ದರು.

ಕೂಟದ ಉಪಾಧ್ಯಕ್ಷ ದಿವಾಕರ ಸನೀಲ್ ಸ್ವಾಗತಿಸಿದರು, ತಾರಾ ಉಮೇಶ್ ಆಚಾರ್ಯ ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ತುಳು ಭಾಷಾ ವಿಷಯದಲ್ಲಿ ಶೇ 100 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಉಡುಪಿ ತುಳುಕೂಟದ ನೂತನ ಯೂಟ್ಯೂಬ್ ಚಾನೆಲ್‌ಗೆ ಚಾಲನೆ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT