ಉಡುಪಿ: ‘ನೀವು ಎಲ್ಲೇ ಇರಿ ಆದರೆ ನಿಮ್ಮ ಮಕ್ಕಳಿಗೆ ತುಳು ಭಾಷೆಯನ್ನು ಕಲಿಸಿ. ಹಾಗಿದ್ದರೆ ಮಾತ್ರ ತುಳು ಭಾಷೆ ಹಾಗೂ ಸಂಸ್ಕೃತಿಯ ಉಳಿವು ಸಾಧ್ಯ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಹೇಳಿದರು.

ತುಳುಕೂಟ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ಸಹಯೋಗದಲ್ಲಿ ನಗರದ ಕಿದಿಯೂರು ಹೋಟೆಲ್ನ ಶೇಷಶಯನ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 30ನೇ ವರ್ಷದ ವಿಶ್ವಪ್ರಭಾ ಪ್ರಾಯೋಜಿತ ‘ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ತುಳು ಭಾಷೆಯನ್ನು ಮೂರನೇ ಭಾಷೆಯಾಗಿ ಮಕ್ಕಳಿಗೆ ಕಲಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮುಂದಿದೆ. ಉಡುಪಿಯಲ್ಲಿ ತುಳುವನ್ನು ಮೂರನೇ ಭಾಷೆಯಾಗಿ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ’ ಎಂದು ಹೇಳಿದರು.

‘ವೈವಿಧ್ಯಮಯವಾದ ತುಳು ಸಂಸ್ಕೃತಿಯ ಬಗ್ಗೆ ಇಂದಿನ ಮಕ್ಕಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪೋಷಕರು ಕಾರ್ಯ ಪ್ರವೃತ್ತರಾಗಬೇಕು’ ಎಂದರು.

‘ಮಕ್ಕಳಿಗೆ ಉಪದೇಶ ಮಾಡುವುದಕ್ಕಿಂತ ಅವರಿಗೆ ಅವಕಾಶಗಳನ್ನು ಒದಗಿಸಿ ಕೊಡಬೇಕು. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ತುಳು ಅಧ್ಯಯನಕ್ಕೆ ಅವಕಾಶ ಮಾಡಿಕೊಡುತ್ತಿರುವುದು ಆಶಾದಾಯಕವಾಗಿದೆ’ ಎಂದು ಹೇಳಿದರು.

ಮುಂಬೈಯ ಸಾಹಿತಿ ಶಾರದಾ ಎಂ. ಅಂಚನ್ ಕೊಡವೂರು ಅವರ ‘ಅಕೇರಿದ ಎಕ್ಕ್’ ಕಾದಂಬರಿಗೆ ಈ ಬಾರಿಯ ಪಣಿಯಾಡಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭದ್ರಾವತಿ ತುಳುಕೂಟದ ಅಧ್ಯಕ್ಷ ಸುಧಾಕರ ಶೆಟ್ಟಿ, ಉಡುಪಿ ಹೋಟೆಲ್ ಉದ್ಯಮಿ ಪ್ರಭಾಕರ್ ಪೂಜಾರಿ, ಸಮಾಜಸೇವಕ ಉಡುಪಿ ವಿಶ್ವನಾಥ ಶೆಣೆ ಉಪಸ್ಥಿತರಿದ್ದರು. ತುಳುಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು ಮತ್ತು ಕೋಶಾಧಿಕಾರಿ ಚೈತನ್ಯ ಎಂ.ಜಿ. ಇದ್ದರು.

ತುಳುಕೂಟದ ಉಪಾಧ್ಯಕ್ಷ ದಿವಾಕರ ಸನಿಲ್ ಅವರ ಸ್ವಾಗತಿಸಿದರು. ಪಣಿಯಾಡಿ ಪ್ರಶಸ್ತಿ ಸಂಚಾಲಕಿ ಶಿಲ್ಪಾ ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾರಾ ಉಮೇಶ್ ಆಚಾರ್ಯ ನಿರೂಪಿಸಿದರು.

ತುಳುನಾಡಿನ ಜೀವನ ಪದ್ಧತಿ ಸಂಸ್ಕೃತಿ ಆಚಾರ ವಿಚಾರಗಳು ಹಾಗೂ ಸ್ತ್ರೀಸಂವೇದನೆಯು ‘ಅಕೇರಿದ ಎಕ್ಕ್’ ಕಾದಂಬರಿಯಲ್ಲಿ ಅನಾವರಣಗೊಂಡಿದೆ
ಸುಲೋಚನಾ ಜನಾರ್ದನ್ ಪಚ್ಚಿನಡ್ಕ ಸಾಹಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.