ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಂದೂರು: ಡಿವೈಡರ್‌ಗೆ ಬೈಕ್ ಡಿಕ್ಕಿ, ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಸಾವು

Last Updated 17 ಜುಲೈ 2022, 7:13 IST
ಅಕ್ಷರ ಗಾತ್ರ

ಬೈಂದೂರು (ಉಡುಪಿ ಜಿಲ್ಲೆ): ತಾಲ್ಲೂಕಿನ ಕಂಬದಕೋಣೆ ಸೇತುವೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮಣಿಪಾಲದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶ ಮೂಲದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19) ಹಾಗೂ ಆದಿತ್ಯ (18) ಮೃತರು. ಬೆಳಿಗ್ಗೆ ಮಣಿಪಾಲದಿಂದ ಮುರ್ಡೇಶ್ವರಕ್ಕೆ ಹೋಗುವಾಗ ಬೈಕ್ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದ ವಿದ್ಯಾರ್ಥಿಗಳನ್ನು ಬೈಂದೂರಿನ ಸಮಾಜ ಸೇವಕ ಇಬ್ರಾಹಿಂ ಗಂಗೊಳ್ಳಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT