ಪಡುಬಿದ್ರಿ: ‘ಯಕ್ಷಗಾನವು ಸಂಗೀತ, ಸಾಹಿತ್ಯ, ಕುಣಿತ, ನಾಟ್ಯ, ಮಾತುಗಾರಿಕೆ ಎಲ್ಲವನ್ನೂ ಒಳಗೊಂಡಿರುವ ಪರಿಪೂರ್ಣ ಕಲಾ ಪ್ರಕಾರ’ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವ ಚಂದ್ರಶೇಖರ ಶೆಟ್ಟಿ ಹೇಳಿದರು.

ಅವರು ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ, ಯಕ್ಷಗಾನ ಕಲಾರಂಗ ಉಡುಪಿ ಸಹಯೋಗದಲ್ಲಿ ಉಚ್ಚಿಲ ಮಹಾಲಕ್ಷ್ಮೀ ದೇವಳದ ಶಾಲಿನಿ ಜಿ. ಶಂಕರ್ ಸಭಾಭವನದಲ್ಲಿ 8 ಶಾಲೆಗಳ ಕಿಶೋರ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಪು ಮಹಾದೇವಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ‘ಶ್ರೀ ಮಹಾಗಣಪತಿ ಲಲಿತೋಪಾಖ್ಯಾನ’, ಕಾಪು ದಂಡತೀರ್ಥ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ‘ಮೀನಾಕ್ಷಿ ಕಲ್ಯಾಣ’ ಪ್ರಸಂಗ ಪ್ರಸ್ತುತಿಗೊಂಡಿತು.

ದೇವಳದ ಆಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ದಂಡತೀರ್ಥ ಶಾಲೆ ಪ್ರಾಂಶುಪಾಲ ನೀಲಾನಂದ ನಾಯ್ಕ್, ಕೋಟೆಕಾರು ಕಲಾಗಂಗೋತ್ರಿಯ ಸದಾಶಿವ, ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಲಾರಂಗದ ನಟರಾಜ ಉಪಾಧ್ಯ, ಗಣೇಶ ರಾವ್ ಎಲ್ಲೂರು ಭಾಗವಹಿಸಿದ್ದರು. ಟ್ರಸ್ಟಿ ವಿ.ಜಿ.ಶೆಟ್ಟಿ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ನಿರೂಪಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.