ಮಂಗಳವಾರ, ಡಿಸೆಂಬರ್ 1, 2020
19 °C

ಉಡುಪಿಯಲ್ಲೂ ಎಸಿಬಿ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿಯಾಗಿರುವ ಡಾ.ಸುಧಾ ಅವರ ನಿವಾಸದ ಮೇಲೆ ಶನಿವಾರ ರಾಜ್ಯದ ಹಲವು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಧಾ ಅವರ ಸಂಬಂಧಿಗಳು ನೆಲೆಸಿರುವ ಬ್ರಹ್ಮಾವರದ ಚಾಂತಾರು ಹಾಗೂ ಬಾರ್ಕೂರಿನ ನಿವಾಸಗಳಲ್ಲೂ ಅಧಿಕಾರಿಗಳು ಶೋಧ ನಡೆಸಿದರು.

ಸುಧಾ ಅವರ ಪತಿ ಉಡುಪಿಯವರಾಗಿರುವುದರಿಂದ ಪತಿಯ ಸಂಬಂಧಿಗಳು ಹಾಗೂ ಆಪ್ತರ ಮನೆಯಲ್ಲಿ ಅಧಿಕಾರಿಗಳು ತೀವ್ರ ಶೋಧ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದರು. ಸುಧಾ ಅವರು ಕೆಲ ಸಮಯ ಉಡುಪಿಯಲ್ಲೂ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಜಿಲ್ಲೆಯಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.