ಭಾನುವಾರ, ಜನವರಿ 24, 2021
17 °C
ಡಿ.22 ಹಾಗೂ 27ರಂದು ಚುನಾವಣೆ; 30ಕ್ಕೆ ಫಲಿತಾಂಶ

ಉಡುಪಿ: 154 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: 7 ತಾಲ್ಲೂಕುಗಳ 154 ಗ್ರಾಮ ಪಂಚಾಯಿತಿಗಳಿಗೆ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಡಿ.22 ರಂದು, ಎರಡನೇ ಹಂತದ ಚುನಾವಣೆ ಡಿ.27ರಂದು ನಡೆಯಲಿದ್ದು 30ರಂದು ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಉಡುಪಿಯ 16, ಹೆಬ್ರಿಯ 9, ಬ್ರಹ್ಮಾವರದ 27, ಬೈಂದೂರಿನ 15 ಗ್ರಾಮ ಪಂಚಾಯಿತಿಗಳಿಗೆ ಹಾಗೂ ಎರಡನೇ ಹಂತದಲ್ಲಿ ಕುಂದಾಪುರದ 44, ಕಾರ್ಕಳದ 27, ಕಾಪುವಿನ 16 ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಡಿ.11 ಕಡೆಯ ದಿನ, 2ನೇ ಹಂತಕ್ಕೆ 16 ಕೊನೆಯ ದಿನವಾಗಿದ್ದು, ಕ್ರಮವಾಗಿ 12 ಹಾಗೂ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಪಮತ್ರ ಪಾಪಸ್‌ ಪಡೆಯಲು ಮೊದಲ ಹಂತಕ್ಕೆ 14, ಎರಡನೇ ಹಂತಕ್ಕೆ 19 ಕೊನೆಯ ದಿನ. ಅಗತ್ಯಬಿದ್ದರೆ ಡಿ.24 ಹಾಗೂ 29ರಂದು ಮರು ಮತದಾನ ನಡೆಸಲಾಗುವುದು ಎಂದರು.

ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಡಿ.31ರವರೆಗೆ ಇರಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರ ನೀತಿ ಸಂಹಿತೆ ಅನ್ವಯವಾಗಲಿದೆ. 1 ಸಾವಿರ ಜನಸಂಖ್ಯೆಗೆ ಒಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತಿದ್ದು, ಈಗಾಗಲೇ ಮತಪಟ್ಟಿ ಸಿದ್ಧತೆ, ಅಧಿಕಾರಿಗಳ ನಿಯೋಜನೆ ನಡೆದಿದೆ ಎಂದರು.

ಸೋಂಕಿತರಿಗೂ ಮತದಾನಕ್ಕೆ ಅವಕಾಶ:

ಕೋವಿಡ್‌ ಸೋಂಕಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಸೋಂಕಿತರು ಹಾಗೂ ಶಂಕಿತರು ಮತದಾನ ಮುಕ್ತಾಯವಾಗುವ ಕೊನೆಯ 1 ಗಂಟೆ ಅವಧಿಯಲ್ಲಿ ಮತದಾನದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.