ಗುರುವಾರ , ಏಪ್ರಿಲ್ 9, 2020
19 °C
ಜನತಾ ಕರ್ಫ್ಯೂನಲ್ಲಿ ಭಾಗವಹಿಸಿ: ಅದಮಾರು ಶ್ರೀ

ಕೃಷ್ಣಮಠದಲ್ಲಿ ಭಕ್ತರ ಸೇವೆ ಸ್ವೀಕಾರ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕೊರೊನಾ ಸೋಂಕು ಹರಡುವಿಕೆಯ ತಡೆಗೆ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಭಕ್ತರಿಂದ ಸೇವೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ದೇವರಿಗೆ ನಿತ್ಯದ ಪೂಜೆಗಳು ಎಂದಿನಂತೆ ನಡೆಯಲಿವೆ. ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥಿಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.

ಸ್ವಾಮೀಜಿ ಕರೆ: ಕೋವಿಡ್‌ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲಿಸೋಣ. ಭಾನುವಾರ ಮನೆಯಲ್ಲಿದ್ದುಕೊಂಡು ಸೋಂಕು ವ್ಯಾಪಿಸದಂತೆ ತಡೆಯೋಣ ಎಂದು ಸ್ವಾಮೀಜಿ ಕರೆ ನೀಡಿದರು.‌

ಕೃಷ್ಣಮಠದಲ್ಲಿ ಎಂದಿನಂತೆ ಪೂಜೆಗಳು ನಡೆಯುತ್ತವೆ. ಆದರೆ, ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಕೃಷ್ಣನ ಜಪ ಮಾಡುವ ಮೂಲಕ ರೋಗವನ್ನು ದೂರವಿಡಬೇಕು ಎಂದು ಶ್ರೀಗಳು ಸಲಹೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು