ಉಡುಪಿ: ಕೋಲ್ಕತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ದೌರ್ಜನ್ಯ ಹಾಗೂ ನಂತರದ ಹಿಂಸಾಚಾರ ವಿರೋಧಿಸಿ, ಭಾರತೀಯ ವೈದ್ಯಕೀಯ ಸಂಘದ ನಿರ್ದೇಶನದಂತೆ ಉಡುಪಿ ಕರಾವಳಿ ಶಾಖೆಯ ಸದಸ್ಯರು ಇದೇ 17ರಂದು ಬೆಳಿಗ್ಗೆ 6 ಗಂಟೆಯಿಂದ 18ರ ಬೆಳಿಗ್ಗೆ 6ರವರೆಗೆ ತುರ್ತು ಚಿಕಿತ್ಸೆ ಹೊರತುಪಡಿಸಿ ತಮ್ಮ ಕ್ಲಿನಿಕ್ ಹಾಗೂ ಆಸ್ಪತ್ರೆಗಳನ್ನು ಮುಚ್ಚಿ, ಇತರ ಸೇವೆಗಳನ್ನು ಸ್ಥಗಿತಗೊಳಿಸಲಿದ್ದಾರೆ.

ಕೋಲ್ಕತ್ತ ಘಟನೆಯನ್ನು ಖಂಡಿಸಿ, ಜನ ಸಾಮಾನ್ಯರಲ್ಲಿ ಉದ್ಯೋಗಸ್ಥ ಮಹಿಳೆಯರ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಸಮಾನ ಮನಸ್ಕ ಸಂಘಟನೆಗಳ ಜೊತೆಗೂಡಿ ಶನಿವಾರ (ಆ. 17) ಸಂಜೆ 6ರಿಂದ 7ರವರೆಗೆ ನಗರದ ಬೋರ್ಡ್ ಹೈಸ್ಕೂಲ್ ಬಳಿಯಿಂದ ಜೋಡುಕಟ್ಟೆ ವರೆಗೆ ಮೌನ ಮೆರವಣಿಗೆ ನಡೆಸಲಿದೆ.

ಈ ಕುರಿತು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರಿಗೆ ಐಎಂಎ ನಿಯೋಗ ಮಾಹಿತಿ ನೀಡಿದೆ ಎಂದು ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ. ರಾಜಲಕ್ಷ್ಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.