ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ​ಸ್ನೇಹಿತೆಯನ್ನು ಸೂಟ್‌ಕೇಸ್‌ನಲ್ಲಿ ಸಾಗಿಸುವಾಗ ಸಿಕ್ಕಿಬಿದ್ದ ಯುವಕ

Last Updated 4 ಫೆಬ್ರುವರಿ 2022, 17:12 IST
ಅಕ್ಷರ ಗಾತ್ರ

ಉಡುಪಿ: ಯುವಕನೊಬ್ಬ ಯುವತಿಯನ್ನು ಸೂಟ್‌ಕೇಸ್‌ನಲ್ಲಿರಿಸಿ ಕಾಲೇಜಿನ ಹಾಸ್ಟೆಲ್‌ಗೆ ಒಳಗೆ ಕೊಂಡೊಯ್ಯುವಾಗ ಭದ್ರತಾ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿದ್ದು ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಎಂಬ ಬರಹದೊಂದಿಗೆ ವಿಡಿಯೊವನ್ನು ಹಲವರು ಹಂಚಿಕೊಂಡಿದ್ದಾರೆ.

ವಿಡಿಯೊ ಬಗ್ಗೆ ಸ್ಪಷ್ಟನೆ ನೀಡಿರುವ ಮಣಿಪಾಲ ವಿವಿ ಮಾಧ್ಯಮ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್‌.ಪಿ.ಕಾರ್‌, ‘ವೈರಲ್ ವಿಡಿಯೊ ಮಣಿಪಾಲ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ್ದಲ್ಲ. ಬೇರೆಲ್ಲೊ ನಡೆದ ವಿಡಿಯೊವನ್ನು 2019ರಲ್ಲಿ ಅಂತರ್ಜಾಲದಲ್ಲಿ ಹರಿಬಿಡಲಾಗಿದೆ. ಅದೇ ವಿಡಿಯೋ ಈಗ ಮತ್ತೆ ಹರಿದಾಡುತ್ತಿದೆ’ ಎಂದು ತಿಳಿಸಿದ್ದಾರೆ.

ಆದರೆ, ವೈರಲ್‌ ವಿಡಿಯೋ ಮಾದರಿಯಲ್ಲಿಯೇ ಈಚೆಗೆ ಮಣಿಪಾಲದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಘಟನೆ ನಡೆದಿರುವುದು ಇದೀಗ ಬಹಿರಂಗವಾಗಿದೆ. ಮಣಿಪಾಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯನ್ನು ಸೂಟ್‌ಕೇಸ್‌ನಲ್ಲಿ ಮಲಗಿಸಿ ಹಾಸ್ಟೆಲ್‌ಗೆ ಕೊಂಡೊಯ್ಯುವಾಗ ಪ್ರವೇಶದ್ವಾರದಲ್ಲಿದ್ದ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸೂಟ್‌ಕೇಸ್‌ನ ಗಾತ್ರ ನೋಡಿ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಯುವಕನಿಂದ ಸೂಟ್‌ಕೇಸ್‌ ತೆರೆಸಿದಾಗ ಯುವತಿ ಒಳಗಿರುವುದು ಪತ್ತೆಯಾಗಿದೆ. ಘಟನೆ ಸಂಬಂಧ ಕಾಲೇಜಿನ ಆಡಳಿತ ಮಂಡಳಿ ಯುವಕ ಹಾಗೂ ಯುವತಿಯಿಂದ ಮುಚ್ಚಳಿಕೆ ಬರೆಸಿಕೊಂಡು ಅವರ ಪೋಷಕರಿಗೆ ವಿಷಯ ತಿಳಿಸಿ ಇಬ್ಬರನ್ನೂ ಕಾಲೇಜಿನಿಂದ ಹೊರಹಾಕಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಘಟನೆ ಸಂಬಂಧ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT