ಉಡುಪಿ: ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಹಲವಾರು ದಾರ್ಶನಿಕರು ಸರಳ ಜೀವನ ನಡೆಸವುದರೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಅಂತಹ ಮಹನೀಯರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದ್ದಲ್ಲಿ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ (ಕೈವಾರ ತಾತಯ್ಯ) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಾರ್ಶನಿಕರ ಕೊಡುಗೆಗಳನ್ನು ನೆನೆಯುವ ಸಲುವಾಗಿ ಅವರ ಜಯಂತಿ ಕಾರ್ಯಕ್ರಮಗಳನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಮಕ್ಕಳು ತಂದೆ-ತಾಯಿಗಳಿಗೆ ವಿಧೇಯರಾಗಿರುವುದರೊಂದಿಗೆ ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಕೌಶಲಗಳನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನ ಪಚ್ಚಿನಡ್ಕ ಉಪನ್ಯಾಸ ನೀಡಿ, 18ನೇ ಶತಮಾನದ ಕಾಲಜ್ಞಾನಿಗಳಾದ ಯೋಗಿ ನಾರೇಯಣ ಯತೀಂದ್ರರು ತಮ್ಮ ಸಾಂಸಾರಿಕ ಜೀವನದಲ್ಲಿ ನಡೆದ ಕಹಿ ಘಟನೆಯಿಂದ ಬೇಸತ್ತು ಕುಟುಂಬವನ್ನು ತೊರೆದು ಧ್ಯಾನ ಮಾಡುತ್ತಾ ಭಗವಂತನ ಇರುವಿಕೆಯನ್ನು ಕಂಡುಕೊಳ್ಳಲು ಅಧ್ಯಾತ್ಮದತ್ತ ಮುಖ ಮಾಡುತ್ತಾರೆ. ಅವರು ಕನ್ನಡ ಮತ್ತು ತೆಲುಗಿನಲ್ಲಿ ಭಕ್ತಿ ಗೀತೆಗಳು, ತತ್ವಪದಗಳನ್ನು ರಚಿಸಿದ್ದಾರೆ ಎಂದರು.

ರೇಣುಕಾಚಾರ್ಯ ಅವರ ಬದುಕಿನ ಚರಿತ್ರೆ ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ ಪಡೆದಿವೆ ಎಂದು ತಿಳಿಸಿದರು.

ಉಪ ತಹಶೀಲ್ದಾರ್ಗಳಾದ ನವನೀತ್ ಹಾಗೂ ಜಯಲಕ್ಷ್ಮಿ, ಸಮುದಾಯದ ಸದಸ್ಯರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವರ್ಷಾ ಬಿ. ಕೋಟ್ಯಾನ್ ನಿರೂಪಿಸಿದರು. ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಸಿದ್ಧಬಸಯ್ಯ ಚಿಕ್ಕಮಠ ವಂದಿಸಿದರು.

ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗುರು-ಹಿರಿಯರನ್ನು ಗೌರವದಿಂದ ಕಾಣಲು ವಿದ್ಯಾರ್ಥಿಗಳಿಗೆ ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.