ಉಡುಪಿ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಗಡೀಪಾರು ಆದೇಶ ಹೊರಡಿಸಿದ್ದಾರೆ.

ಕಳತ್ತೂರು ಗ್ರಾಮದ ಮಹಮ್ಮದ್ ನೌಫಿಲ್ ವಿರುದ್ಧ ಜಿಲ್ಲೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು, ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಕೊಡವೂರು ಗ್ರಾಮದ ಸುಹಾನ್ ಪೂಜಾರಿ ವಿರುದ್ಧ 4 ಪ್ರಕರಣ ದಾಖಲಾಗಿವೆ.

ಮಹಮ್ಮದ್ ನೌಫಿಲ್ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿ, ಸುಹಾನ್ ಪೂಜಾರಿಯನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-28-1253019880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.