ಉಡುಪಿ: ಮಲ್ಪೆ ಬೀಚ್ನಲ್ಲಿ ಅಕ್ಕ ಕೆಫೆಯನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್ ಅವರು ಶನಿವಾರ ಉದ್ಘಾಟಿಸಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಸಂಜೀವಿನಿ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಈ ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ.

ಅಕ್ಕ ಕೆಫೆಯನ್ನು ಕಲ್ಯಾಣಪುರದ ನಿಧಿ ಸಂಜೀವಿನಿ ಸ್ವಸಹಾಯ ಸಂಘ ನಿರ್ವಹಿಸುತ್ತಿದೆ. ಮಹಿಳೆಯರೇ ಸ್ವತಃ ಈ ಕೆಫೆಯ ಸಂಪೂರ್ಣ ಉಸ್ತುವಾರಿ ಹೊತ್ತುಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆಯತ್ತ ಹೆಜ್ಜೆ ಇಟ್ಟಿದ್ದಾರೆ.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿ.ಪಂ.ಸಿಇಒ ಪ್ರತೀಕ್ ಬಾಯಲ್, ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವಾ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ನವ್ಯ, ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಕೃಷಿ ವ್ಯವಸ್ಥಾಪಕಿ ಸೌಮ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-28-2035080107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.