ಉಡುಪಿ: ಅಂಬಲಪಾಡಿಯ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ ವಿಸ್ತರಣೆಗಾಗಿ ಭೂಸ್ವಾಧೀನ ಮಾಡಿರುವ ದಾಖಲೆಗಳ ಸಹಿತ ಅಧಿಕಾರಿಗಳೊಂದಿಗೆ ನಿಗದಿತ ಕಾಲ ಮಿತಿಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಮಾರ್ಕಿಂಗ್ ಮಾಡುವ ಮೂಲಕ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ರಾ.ಹೆ.66 ಅಂಬಲಪಾಡಿ ಸರ್ವಿಸ್ ರಸ್ತೆಗೆ ಭೂಸ್ವಾಧೀನ ಮಾಡಿರುವ ಸ್ಥಳದಲ್ಲಿ ರಸ್ತೆ ವಿಸ್ತರಣೆ, ಅಂಡರ್ಪಾಸ್ನ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಉಡುಪಿ ನಗರವನ್ನು ಸಂಪರ್ಕಿಸುವ ಉಡುಪಿ ನಗರಸಭೆಯ ರಸ್ತೆಯನ್ನು ಅಂಡರ್ ಪಾಸ್ ದ್ವಾರಕ್ಕೆ ಸಮನಾಗಿ ವಿಸ್ತರಣೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಅಂಡರ್ಪಾಸ್ನ ಜಂಕ್ಷನ್ ರಸ್ತೆಯನ್ನು ರಾ.ಹೆ. ಪ್ರಾಧಿಕಾರದ ನಿಯಮದಂತೆ ಅಂಡರ್ಪಾಸ್ ಮಧ್ಯದಿಂದ 30 ಮೀಟರ್ ವಿಸ್ತೀರ್ಣದ ಸುತ್ತಳತೆಯಲ್ಲಿ ವಿಸ್ತರಣೆಗೊಳಿಸಿ ಲಘು ಮತ್ತು ಘನ ವಾಹನಗಳ ಸುಗಮ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಂಡರ್ ಪಾಸ್ ವಿನ್ಯಾಸದಲ್ಲಿರುವಂತೆ ಪಾದಚಾರಿ ಮಾರ್ಗದಲ್ಲಿ ಸುರಕ್ಷಿತ ಜನ ಸಂಚಾರಕ್ಕಾಗಿ ಸರ್ವಿಸ್ ರಸ್ತೆಗೆ ಟ್ರಾಫಿಕ್ ಸಿಗ್ನಲ್ ಅಳವಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಮನವಿಗೆ ಸ್ಪಂದಿಸಿದ ಸಂಸದ ಕೋಟ ಅವರು ಶೀಘ್ರ ಅಂಬಲಪಾಡಿಯ ರಾ.ಹೆ.66ರ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ, ತುರ್ತಾಗಿ ನಡೆಯಬೇಕಾಗಿರುವ ಅಗತ್ಯ ಕಾಮಗಾರಿಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನವನ್ನು ನೀಡುವ ಜೊತೆಗೆ ಮನವಿಯಲ್ಲಿ ಉಲ್ಲೇಖಿಸಿರುವ ಪ್ರಮುಖ ಬೇಡಿಕೆಗಳಿಗೆ ಸ್ಪಂದನ ನೀಡುವುದಾಗಿ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಭಾಸ್ಕರ್ ಶೆಟ್ಟಿ ಕಡೆಕಾರು, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಗರಸಭಾ ಮಾಜಿ ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಶ್ರೀಕಾಂತ್ ಶೆಟ್ಟಿ ಅಂಬಲಪಾಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.