ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ₹ 2.33 ಕೋಟಿ ವೆಚ್ಚದ ಸವಲತ್ತುಗಳ ವಿತರಣೆ

Last Updated 13 ಮಾರ್ಚ್ 2022, 15:55 IST
ಅಕ್ಷರ ಗಾತ್ರ

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಮೀನು ಮಾರಾಟ ಫೆಡರೇಷನ್‌ನಿಂದ ಶನಿವಾರ ಮಲ್ಪೆಯ ಏಳೂರು ಮೊಗವೀರ ಮಹಾಜನ ಸಂಘದ ಸಭಾಭವನದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಸದಸ್ಯ ಸಹಕಾರಿ ಸಂಘಗಳಿಗೆ ಪ್ರೋತ್ಸಾಹಕ ಉಡುಗೊರೆ ಹಾಗೂ ₹ 2.33 ಕೋಟಿ ಮೊತ್ತದ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಜಿ.ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಶ್‌ಪಾಲ್ ಸುವರ್ಣ ನೇತೃತ್ವದ ಮೀನು ಮಾರಾಟ ಫೆಡರೇಷನ್ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾತನಾಡಿ, ದಶಕಗಳ ಹಿಂದೆ ನಷ್ಟದಲ್ಲಿದ್ದ ಸಂಸ್ಥೆಯನ್ನು ಲಾಭದಾಯಕವಾಗಿಸಿದ ತೃಪ್ತಿ ಇದೆ. ಫೆಡರೇಷನ್ ಲಾಭಾಂಶದ ಒಂದು ಭಾಗವನ್ನು ಸಮಾಜಕ್ಕೆ ನೀಡುವ ಉದ್ದೇಶದಿಂದ ಈ ವರ್ಷ 3.65 ಕೋಟಿ ವೆಚ್ಚದಲ್ಲಿ ಸವಲತ್ತುಗಳನ್ನು ವಿತರಿಸಲಾಗಿದೆ ಎಂದರು.

ಶಾಸಕ ರಘುಪತಿ ಭಟ್‌ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿ, ಫೆಡರೇಷನ್‌ನ ಸಾಮಾಜಿಕ ಬದ್ಧತೆಯ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.

ಉಚ್ಚಿಲ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್‌ ಸದಸ್ಯ ಸಹಕಾರಿ ಸಂಘಗಳಿಗೆ ಪ್ರೋತ್ಸಾಹಕ ಉಡುಗೊರೆ ವಿತರಿಸಿದರು. ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ.ಸುವರ್ಣ,ಉದ್ಯಮಿ ಹರಿಯಪ್ಪ ಕೋಟ್ಯಾನ್‌, ಉದ್ಯಮಿ ಆನಂದ ಸುವರ್ಣ, ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗುಂಡು ಬಿ.ಅಮೀನ್‌, ನಗರಸಭಾ ಸದಸ್ಯ ವಿಜಯ ಕುಂದರ್, ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಮಂಜುನಾಥ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT