ಕುಂದಾಪುರ: ಕುಂಭಾಸಿ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಈಚೆಗೆ ಅಂಗಾರಕ ಸಂಕಷ್ಟಹರ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಸಂಭ್ರಮದಿಂದ ನಡೆದವು.

ಅಂಗಾರಕ ಸಂಕಷ್ಟಹರ ಚತುರ್ಥಿ ಮುಹೂರ್ತದಲ್ಲಿ, ಲೋಕ ಕಲ್ಯಾಣಾರ್ಥವಾಗಿ ದೇವರಿಗೆ ಸಹಸ್ರ ನಾಳಿಕೇರ ಗಣಯಾಗ, ವಿಶೇಷ ಪೂಜೆ ನಡೆಯಿತು. ದೇವರಿಗೆ ವಿಶೇಷ ಅಲಂಕಾರ, ಅಭಿಷೇಕ, ಸತ್ಯಗಣಪತಿ ವ್ರತ ಸಹಿತ ಮಹಾಪೂಜೆಯೊಂದಿಗೆ ಹೋಮ ಹವನ, ರಾತ್ರಿ ಮಹಾ ರಂಗಪೂಜೆ ಯೊಂದಿಗೆ ರಜತ ರಥೋತ್ಸವ, ಸುವರ್ಣ ಪಲ್ಲಕ್ಕಿ ಉತ್ಸವ ನಡೆಯಿತು.

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಭಕ್ತರು ಮಹೋತ್ಸವಕ್ಕೆ ಸಾಕ್ಷಿಯಾದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರ ಓಂಕಾರ ಭಜನಾ ಮಂಡಳಿಯಿಂದ ಭಜನೆ, ಕೊಮೆ ತೆಕ್ಕಟ್ಟೆ ಯಶಸ್ವಿ ಕಲಾ ವೃಂದ, ಸಿದ್ಧಾಪುರ ಯಕ್ಷ ನುಡಿಸಿರಿ ಬಳಗದಿಂದ ‘ಭೀಷ್ಮ ವಿಜಯ’ ಯಕ್ಷಗಾನ ತಾಳಮದ್ದಲೆ ನಡೆಯಿತು.

ದೇವಳದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ವ್ಯಾಸ ಉಪಾಧ್ಯಾಯ ಮತ್ತು ಸಹೋದರರು, ಮಾಜಿ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿ ಕೆ. ಪದ್ಮನಾಭ ಉಪಾಧ್ಯಾಯ, ಕೆ. ನಿರಂಜನ ಉಪಾಧ್ಯಾಯ, ಅರ್ಚಕರು, ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕ ನಟೇಶ್ ಕಾರಂತ್, ಸಿಬ್ಬಂದಿ, ಭಕ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-28-63616986

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.