ಮಂಗಳವಾರ, ಫೆಬ್ರವರಿ 7, 2023
27 °C

ಆನೆಗುಡ್ಡೆ: ರಥೋತ್ಸವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಂದಾಪುರ: ಇಲ್ಲಿಗೆ ಸಮೀಪದ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮರಥೋತ್ಸವ ಭಾನುವಾರ ವೈಭವದಿಂದ ಸಂಪನ್ನಗೊಂಡಿತು.

ಲೋಕಕಲ್ಯಾಣಾರ್ಥ ಯಂತ್ರೋದ್ಧಾರ ಪೂರ್ವಕ ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ, ಸುವರ್ಣ ಪಲ್ಲಕಿ ಉತ್ಸವ, ಮಹಾ ಅನ್ನಸಂತರ್ಪಣೆ, ಶಯನೋತ್ಸವ, ರಾತ್ರಿ ಸುಡುಮದ್ದು ಪ್ರದರ್ಶನ, ಪ್ರಸಾದ ವಿತರಣೆ, ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

‌ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಾಲಿಗ್ರಾಮ ಸತೀಶ್ ದೇವಾಡಿಗ ಮತ್ತು ಬಳಗದವರಿಂದ ಸ್ಯಾಕ್ಸೊಫೋನ್ ವಾದನ, ಹನು ಮಗಿರಿ ಶ್ರೀ ಕೋದಂಡರಾಮ ಯಕ್ಷಗಾನ ಮಂಡಳಿ ಇವರಿಂದ ಪೌರಾಣಿಕ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.

ದೇವಳದ ಆಡಳಿತ ಮೊಕ್ತೇಸರ ಕೆ.ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರರಾದ ಕೆ.ಸೂರ್ಯ ನಾರಾಯಣ ಉಪಾಧ್ಯಾಯ, ಕೆ.ವಿಠಲ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ದೇವಿದಾಸ್ ಉಪಾಧ್ಯಾಯ, ವ್ಯವಸ್ಥಾಪಕ ನಟೇಶ್ ಕಾರಂತ್ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು