ಉಡುಪಿ: ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹದ ಮಟ್ಟವನ್ನು ಪರಿಶೀಲಿಸಿದರು.

ನಗರದ ಜನರಿಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬರಾಜಾಗುತ್ತಿದ್ದು, ಬಜೆ ಅಣೆಕಟ್ಟೆಯಲ್ಲಿ ಕಳೆದ ವರ್ಷಕ್ಕಿಂತ ನೀರಿನ ಲಭ್ಯತೆ ಕಡಿಮೆ ಇದೆ. ಉಡುಪಿ ನಗರ ಭಾಗಕ್ಕೆ ನಿರಂತರ ನೀರು ಪೂರೈಕೆಗೆ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ತಿಳಿಸಿದರು. ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿದರು.

ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ಗಿರೀಶ್ ಅಂಚನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದುರ್ಗಾಪ್ರಸಾದ್, ಸಹಾಯಕ ಎಂಜಿನಿಯರ್ ಚೇತನ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-28-315485753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.