ಉಡುಪಿ: ರಸ್ತೆ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿರುವ ಕಾರಣ ಬಾಳೆಬರೆ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಏ. 9ರಂದು ಭೂಕುಸಿತ ಸಂಭವಿಸಿ ಕಾಂಕ್ರೀಟ್ ರಸ್ತೆ ಅಲ್ಲಲ್ಲಿ ಬಿರುಕುಗಳು ಕಂಡುಬಂದಿದೆ. ಮತ್ತೆ ಭೂಕುಸಿತವಾಗುವ ಸಂಭವ ಇರುವುದರಿಂದ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಲೋಕೋಪಯೋಗಿ ಇಲಾಖೆ ಉಡುಪಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವರದಿ ಸಲ್ಲಿಸಿದ್ದಾರೆ.

ವರದಿ ಪರಿಶೀಲಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ತೀರ್ಥಹಳ್ಳಿ– ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿ ಮೂಲಕ ವಾಹನಗಳ ಸಂಚಾರವನ್ನು ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪರ್ಯಾಯ ಮಾರ್ಗ: ತೀರ್ಥಹಳ್ಳಿ– ಕುಂದಾಪುರ ರಾಜ್ಯ ಹೆದ್ದಾರಿ-52ರ ತೀರ್ಥಹಳ್ಳಿಯಿಂದ ಕುಂದಾಪುರ ಕಡೆ ಹೋಗುವ (ತೀರ್ಥಹಳ್ಳಿ– ರಾವೆ– ಕಾನುಗೋಡು– ಮಾಸ್ತಿಕಟ್ಟೆ– ಹುಲಿಕಲ್ ಘಾಟ್– ಹೊಸಂಗಡಿ– ಸಿದ್ಧಾಪುರ ಮೂಲಕ ಕುಂದಾಪುರ ರಾಜ್ಯ ಹೆದ್ದಾರಿ) ವಾಹನಗಳು ತೀರ್ಥಹಳ್ಳಿ– ರಾವೆ– ಕಾನುಗೋಡು– ನಗರ–ಕೊಲ್ಲೂರು– ಕುಂದಾಪುರ ರಸ್ತೆಯಲ್ಲಿ ಸಂಚರಿಸಬೇಕು. ನಗರ ಯದಾಪುರ ರಾಜ್ಯ ಹೆದ್ದಾರಿ 278 ರಸ್ತೆಯ ತೀರ್ಥಹಳ್ಳಿಯಿಂದ ಯಡೂರು ಹುಲಿಕಲ್ ಕುಂದಾಪುರ ಕಡೆ ಹೋಗುವ (ತೀರ್ಥಹಳ್ಳಿ– ಯಡೂರು– ಸುಳುಗೋಡು– ಮಾಸ್ತಿಕಟ್ಟೆ– ಹುಲಿಕಲ್ ಘಾಟ್– ಹೊಸಂಗಡಿ– ಸಿದ್ದಾಪುರ ಮೂಲಕ ಕುಂದಾಪುರ ಸೇರುವ ರಸ್ತೆ) ವಾಹನಗಳು ತೀರ್ಥಹಳ್ಳಿ– ಯಡೂರು– ಮಾಸ್ತಿಕಟ್ಟೆ– ಕಾನುಗೋಡು –ನಗರ– ಕೊಲ್ಲೂರು– ಕುಂದಾಪುರ ರಸ್ತೆಯಲ್ಲಿ ಸಂಚರಿಸಬೇಕು. ಶಿವಮೊಗ್ಗ/ ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ (ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ– ನಗರ– ಮಾಸ್ತಿಕಟ್ಟೆ– ಹುಲಿಕಲ್ ಘಾಟ್– ಹೊಸಂಗಡಿ– ಸಿದ್ಧಾಪುರ ಮೂಲಕ ಕುಂದಾಪುರ ಸೇರುವ ರಸ್ತೆ) ವಾಹನಗಳು ಶಿವಮೊಗ್ಗ ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ, ಅನಂತರ ಹೊನ್ನಾವರದಿಂದ ಭಟ್ಕಳ– ಬೈಂದೂರು– ಕುಂದಾಪುರ ರಸ್ತೆಯಲ್ಲಿ ಸಾಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-44-1042646947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.