ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ ಬುಧವಾರ ನಡೆಯಿತು.

ಉಡುಪಿಯ ಜೋಡುಕಟ್ಟೆಯಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಸಾಂಪ್ರದಾಯಿಕ ರೀತಿಯಲ್ಲಿ ಚಾಲನೆ ನೀಡಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರ ಜಿ.ಶಂಕರ್, ಉದ್ಯಮಿ ಪ್ರಸಾದ್ರಾಜ್ ಕಾಂಚನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಚಾಲಕ ರಮೇಶ್ ಕಾಂಚನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಮಾಧವ ಪೂಜಾರಿ, ಪ್ರಧಾನ ತಂತ್ರಿ ಪಿ.ಶಶಿಕಾಂತ ತಂತ್ರಿ, ಪ್ರಧಾನ ಅರ್ಚಕ ಪಿ.ವಾಸುದೇವ ಉಪಾಧ್ಯ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಜಯ ಸಿ.ಕೋಟ್ಯಾನ್, ದಿನೇಶ್ ಪುತ್ರನ್, ಎಂ.ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.

ಹೊರೆ ಕಾಣಿಕೆಯಲ್ಲಿ ಸುಮಾರು 200ಕ್ಕೂ ಅಧಿಕ ವಾಹನಗಳು ಪಾಲ್ಗೊಂಡಿದ್ದವು. ಡೋಲು, ಕೊಂಬು, ಚೆಂಡೆ, ಬಿರುದಾವಳಿ, ಹಸಿರು ಕೊಡೆ, ಕುಣಿತ ಭಜನಾ ತಂಡಗಳು, ಕೀಲು ಕುದುರೆ, ನಾಸಿಕ್ ಬ್ಯಾಂಡ್, ವಿವಿಧ ಸಾಂಸ್ಕೃತಿಕ ತಂಡಗಳು ಭಾಗವಹಿಸಿ ಮೆರವಣಿಗೆ ಮೆರಗು ನೀಡಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-28-1950079343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.