ಉಡುಪಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ವೈಭವ ಇದೇ 16ರಿಂದ 20ರ ವರೆಗೆ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಮಾಧವ ಪೂಜಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, 20 ರಂದು ಬೆಳಿಗ್ಗೆ 9.15ಕ್ಕೆ ಶ್ರೀಮಹಾಲಿಂಗೇಶ್ವರ ದೇವರ ಪರಿಕಲಶ ಅಭಿಷೇಕ, ಬ್ರಹ್ಮಕಲಶಾಭಿಷೇಕ, ಕಲಾನ್ಯಾಸ, ಮಹಾಪೂಜೆ, ಪಲ್ಲಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ಮತ್ತು ಸಂಜೆ 6ಗಂಟೆಗೆ ಉತ್ಸವ ಬಲಿ, ಮಹಾರಂಗ ಪೂಜೆ, ಭೂತ ಬಲಿ ನಡೆಯಲಿದೆ ಎಂದರು.

15ರಂದು ಮಧ್ಯಾಹ್ನ 3ಗಂಟೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ ಜೋಡುಕಟ್ಟೆಯಿಂದ ಸರ್ವಿಸ್ ನಿಲ್ದಾಣದ ಮೂಲಕ ಕ್ಷೇತ್ರ ತಲುಪಲಿದೆ. 16ರಿಂದ ಪ್ರತಿದಿನ ಸಂಜೆ 6.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎಂದು ಹೇಳಿದರು.

16 ರಂದು ಶಿವಪ್ರೇರಣ ಸಹಸ್ರ ಕಂಠ ಗಾಯನ ಹಾಗೂ ರಾಘು ಮಾಸ್ಟ್ರು ತುಳು ನಾಟಕ, 17ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಶಿವದೂತ ಗುಳಿಗ ನಾಟಕ, 18ರಂದು ಶಿವ ಪ್ರೇರಣಾ ಚಿತ್ರಕಲಾ ಸ್ಪರ್ಧೆ ಹಾಗೂ ಸ್ಯಾಕ್ಸೋಫೋನ್ ವಾದನ, ನೃತ್ಯ ವೈಭವ, 19ರಂದು ಮದರಂಗಿ ಮತ್ತು ರಂಗೋಲಿ ಸ್ಪರ್ಧೆ, ವೀಣಾ ನಾದೋತ್ಸವ, ಜಾನಪದ ವೈಭವ ನಡೆಯಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ತಂತ್ರಿ ಪಿ.ಶಶಿಕಾಂತ ತಂತ್ರಿ, ಪ್ರಧಾನ ಅರ್ಚಕ ಪಿ.ವಾಸುದೇವ ಉಪಾಧ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ ಪುತ್ರನ್, ಎಂ.ಪ್ರಭಾಕರ ಶೆಟ್ಟಿ, ಶೇಖರ ಶೆಟ್ಟಿ, ಯು.ಸುದೇಶ್ ಶೇಟ್, ರಾಜೇಶ್ ಬಿ., ವಿದ್ಯಾಲತಾ ಯು.ಶೆಟ್ಟಿ, ಶಮಿತಾ ಎಸ್.ಭಂಡಾರಿ, ರವಿರಾಜ್ ಭಟ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-1963811079

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.