ಬುಧವಾರ, ಆಗಸ್ಟ್ 10, 2022
25 °C

ಉಡುಪಿ ಸುಂದರಿ ಸಿನಿ ಶೆಟ್ಟಿ ಮಿಸ್ ಇಂಡಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಫೆಮಿನಾ ಮಿಸ್‌ ಇಂಡಿಯಾ ಸೌಂದರ್ಯ ಸ್ಪರ್ಧೆಯ ಕಿರೀಟ ಮುಡಿಗೇರಿಸಿಕೊಂಡಿರುವ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಇನ್ನಂಜೆ ಸಮೀಪದ ಮಡಂಬು ಮೂಲದವರು.

ಸದಾನಂದ ಶೆಟ್ಟಿ ಹಾಗೂ ಹೇಮಾ ಶೆಟ್ಟಿ ದಂಪತಿಯ ಪುತ್ರಿ ಸಿನಿ ಶೆಟ್ಟಿ ಉಡುಪಿ ಮೂಲದವರಾದರೂ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ ಆರಂಭಿಸಿದ್ದು ಮುಂಬೈನಲ್ಲಿ. ಮಾಡೆಲಿಂಗ್‌ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಿನಿ ಶೆಟ್ಟಿ ಹಲವು ಜಾಹೀರಾತುಗಳಲ್ಲಿ ಅಭಿನಯಿಸಿದ್ದಾರೆ.

ದಶಕಗಳ ಹಿಂದೆಯೇ ಸಿನಿ ಶೆಟ್ಟಿ ಪೋಷಕರು ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದು ಹೋಟೆಲ್‌ ಉದ್ಯಮದಲ್ಲಿದ್ದಾರೆ. ದೈವ ಹಾಗೂ ಧಾರ್ಮಿಕ ಉತ್ಸವಗಳಲ್ಲಿ ಪಾಲ್ಗೊಳ್ಳಲು ಉಡುಪಿಗೆ ಆಗಾಗ ಬಂದು ಹೋಗುತ್ತಾರೆ ಎಂದು ಸಂಬಂಧಿಗಳು ತಿಳಿಸಿದ್ದಾರೆ. ಸಿನಿಶೆಟ್ಟಿ ಭರತನಾಟ್ಯ ಕಲಾವಿದೆಯೂ ಹೌದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು